ಮೈನಿಂಗ್ ಹಗರಣ: ಐಎಎಸ್ ಅಧಿಕಾರಿ ಮಹೇಂದ್ರ ಜೈನ್ ಜಾಮೀನು ಅರ್ಜಿ ವಜಾ

ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಎಎಸ್ ಅಧಿಕಾರಿ ಮಹೇಂದ್ರ ಜೈನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ...
ಮಹೇಂದ್ರ ಜೈನ್
ಮಹೇಂದ್ರ ಜೈನ್
ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಎಎಸ್ ಅಧಿಕಾರಿ ಮಹೇಂದ್ರ ಜೈನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ಗೆ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. 
ವಿಚಾರಣೆಗೆ ಹಾಜರಾದರೆ ಎಸ್‌ಐಟಿ ಅಧಿಕಾರಿಗಳು ಬಂಧಿಸಬಹುದು ಎಂಬ ಭೀತಿಯಿಂದ ಮಹೇಂದ್ರ ಜೈನ್‌ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. 
ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲು ಮಹೇಂದ್ರ ಜೈನ್‌ ನಿರ್ಧರಿಸಿದ್ದಾರೆ.
ಈಗಾಗಲೇ ಐಎಎಸ್ ಅಧಿಕಾರಿ ಗಂಗಾರಾಮ್‌ ಬಡೇರಿಯಾರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 
ಮಾಜಿ ಸಿಎಂ ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯೂ ಕೂಡ ಲೋಕಾ ಕೋರ್ಟ್‌ನಲ್ಲಿ ವಜಾಗೊಂಡಿತ್ತು. ಇಂದು ಜಂತಕಲ್ ಮೈನಿಂಗ್ ಹಗರಣದ ಸಂಬಂಧ ಇಂದು ಜಾಮೀನು ಅರ್ಜಿ ವಿಚಾರಣೆ  ನಡೆಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com