ಬಾಡಿಗೆ ನೆಪದಲ್ಲಿ ಆಟೊದಲ್ಲಿ ಕರೆದೊಯ್ದ ದುಷ್ಕರ್ಮಿಗಳು ಬೆಂಜನಪದವು ಕೆನರಾ ಕಾಲೇಜು ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೆಲವು ದಿನಗಳಿಂದ ಗಲಭೆ ಪೀಡಿತವಾಗಿರುವ ಕಲ್ಲಡ್ಕ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದೆ. ಬೆಂಜನಪದವು, ಮೆಲ್ಕಾರ್ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.