ಈ ಹಿನ್ನೆಲೆಯಲ್ಲಿ ಕಲ್ಲಡ್ಕ, ಬಂಟ್ವಾಳ ಸುತ್ತಮುತ್ತ ಉದ್ವಿಗ್ನ ವಾತಾವರಣ ಉಂಟಾಗಿದ್ದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸರಿಗೆ ಕಲಯಿಯನ್ನು ಹತ್ಯೆ ಮಾಡಿದವರ ಸುಳಿವು ಸಿಕ್ಕಿದೆ ಎಂದು ಹೇಳಿದ್ದಾರೆ.