ಉಡುಪಿ ಕೃಷ್ಣ ಮಠದಲ್ಲಿ ಇಫ್ತಾರ್ ಪ್ರತಿಭಟಿಸಿ ಜುಲೈ 2ರಂದು ರಾಜ್ಯಾದ್ಯಂತ ಧರಣಿಗೆ ಮುತಾಲಿಕ್ ಕರೆ

ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಇದೇ ಮೊದಲ ಬಾರಿಗೆ ಪೇಜಾವರ ಶ್ರೀಗಳು ಮುಸ್ಲಿಂರಿಗೆ ಇಫ್ತಾರ್ ಕೂಟವನ್ನು ಆಯೋಜಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ...
ಇಫ್ತಾರ್ ಆಯೋಜನೆ
ಇಫ್ತಾರ್ ಆಯೋಜನೆ
ಉಡುಪಿ(ಕರ್ನಾಟಕ): ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಇದೇ ಮೊದಲ ಬಾರಿಗೆ ಪೇಜಾವರ ಶ್ರೀಗಳು ಮುಸ್ಲಿಂರಿಗೆ ಇಫ್ತಾರ್ ಕೂಟವನ್ನು ಆಯೋಜಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. 
ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಮುಸ್ಲಿಂರಿಗೆ ಇಫ್ತಾರ್ ಕೂಟ ಆಯೋಜಿಸುವ ಮೂಲಕ ಪೇಜಾವರ ಶ್ರೀಗಳು ಸಮಾಜಕ್ಕೆ ತಪ್ಪು ಸಂದೇಶ ನೀಡಿದ್ದಾರೆ ಎಂದು ಆರೋಪಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜುಲೈ 2ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. 
ಗೋಮಾಂಸ ಭಕ್ಷಕರಿಗೆ ದೇವಸ್ಥಾನದ ಒಳಗೆ ಪ್ರವೇಶ ನೀಡಲಾಗಿದೆ. ಅಲ್ಲದೆ ಇಫ್ತಾರ್ ಕೂಟ ಆಯೋಜಿಸಲಾಗಿದ್ದು ಮಠದ ಆವರಣದೊಳಗೆ ನಮಾಜ್ ಗೆ ಅವಕಾಶ ಮಾಡಿಕೊಟ್ಟಿದ್ದು 
ಇದು ಇಡೀ ಹಿಂದೂ ಸಮಾಜಕ್ಕೆ ಮಾಡಿದ ಅಪಮಾನ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 
ಶ್ರೀಕೃಷ್ಣಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ವಿರೋಧಿಸಿರುವ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು ನಾನು ಮೊದಲಿನಿಂದಲೂ ಕೋಮು ಸಾಮರಸ್ಯ ಬೆಳೆಸುವ ಹಾದಿಯಲ್ಲಿದ್ದೇನೆ. ಹಾಗಾಗಿ ನಾನು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ. ನನ್ನದು ಸ್ವತಂತ್ರ ವ್ಯಕ್ತಿತ್ವ. ಹಿಂದೂ ಧರ್ಮದ ಬಗ್ಗೆ ಅವರಿಗಿಂತ ಚೆನ್ನಾಗಿ ನನಗೆ ಗೊತ್ತು. ಮುಸ್ಲಿಂರ ಜೊತೆ ಉತ್ತಮ ಬಾಂಧವ್ಯ ಇರಿಸಿಕೊಳ್ಳಲಾಗಿದೆ. ಇಫ್ದಾರ್ ಕೂಡದಿಂದ ಹಿಂದೂಗಳು ಉದಾರಿಗಳೆಂಬ ಸಂದೇಶ ರವಾನಿಸಿದಂತಾಗಿದೆ ಎಂದು ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com