ಪ್ರತಿ ವರ್ಷ ಜೂ. 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲು ಸರ್ಕಾರ ಆದೇಶ

ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಬೆಂಗಳೂರು ನಿರ್ಮಾಪಕ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು....
ಕೆಂಪೇಗೌಡರ ಕಟೌಟ್
ಕೆಂಪೇಗೌಡರ ಕಟೌಟ್
ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಬೆಂಗಳೂರು ನಿರ್ಮಾಪಕ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಆಚರಿಸುತ್ತಿದ್ದು, ಇನ್ನು ಮುಂದೆ ಪ್ರತಿ ವರ್ಷ ಜೂನ್ 27ರಂದು ಎಲ್ಲ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸುವಂತೆ ಸರ್ಕಾರ ಮಂಗಳಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರದ ನಿರ್ಮಾಣ ಮತ್ತು ಅಭಿವೃದ್ಧಿಗೆ ಕೆಂಪೇಗೌಡರು ನೀಡಿರುವ ಕೊಡುಗೆ ಮಹತ್ತರವಾದದ್ದು. ಅಲ್ಲದೆ, ಅವರ ಕೊಡುಗೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರ ಪ್ರತಿ ವರ್ಷ ಜೂನ್ 27ರಂದು ಕೆಂಪೇಗೌಡರ ಜಯಂತಿ ಆಚರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ಈ ವೇಳೆ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ ಹಾಗೂ ಕುಮಾರ ಚಂದ್ರಶೇಖರ ನಾಥ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಅನಂತ್ ಕುಮಾರ್, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಎಂ. ಕೃಷ್ಣಪ್ಪ, ರಾಮಲಿಂಗಾರೆಡ್ಡಿ, ಜಾರ್ಜ್, ರೋಷನ್ ಬೇಗ್, ಉಮಾಶ್ರೀ, ಎಂ.ಆರ್. ಸೀತಾರಾಮ್, ಕೃಷ್ಣ ಬೈರೇಗೌಡ, ಮೇಯರ್ ಪದ್ಮಾವತಿ, ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com