ಹಳೆಯ ವಿದ್ಯಾರ್ಥಿಗಳ ಸಂಘಟನೆ ನೆರವಿನಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಚಿಂತನೆ

ಹಳೆಯ ವಿದ್ಯಾರ್ಥಿಗಳ ಸಂಘಟನೆ ನೆರವಿನಿಂದ ಸರ್ಕಾರಿ ಶಾಲಗೆಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿಂತನೆ ನಡೆಸಿದೆ.
ಸರ್ಕಾರಿ ಶಾಲೆ
ಸರ್ಕಾರಿ ಶಾಲೆ
Updated on: 
ಬೆಂಗಳೂರು: ಹಳೆಯ ವಿದ್ಯಾರ್ಥಿಗಳ ಸಂಘಟನೆ ನೆರವಿನಿಂದ ಸರ್ಕಾರಿ ಶಾಲಗೆಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿಂತನೆ ನಡೆಸಿದೆ. 
ಇದಕ್ಕಾಗಿ ಆಯೋಗ ಹೊಸ ಆದೇಶವನ್ನು ಹೊರಡಿಸಿದ್ದು, ಜು.16 ರ ವೇಳೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಪ್ರಾರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಈ ಹಿಂದೆ ಓದಿದ ಅನೇಕ ವಿದ್ಯಾರ್ಥಿಗಳು ದೇಶದಲ್ಲಿ, ಅಥವಾ ವಿದೇಶಗಳಲ್ಲಿ ಒಳ್ಳೆಯ ಸ್ಥಿತಿಯಲ್ಲಿದ್ದಾರೆ. ಅವರಿಂದ ನೆರವು ಪಡೆದು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಆಯೋಗದ ಅಧ್ಯಕ್ಷರಾಗಿರುವ ಕೃಪಾ ಆಳ್ವ ಹೇಳಿದ್ದಾರೆ.  
ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘಟನೆಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ನಾನು ಕೆಲವು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದಾಗ ಅಲ್ಲಿನ ಹಳೆಯ ವಿದ್ಯಾರ್ಥಿಗಳ ಸಂಘಟನೆಗಳು ಅಭಿವೃದ್ಧಿಪಡಿಸಿದ ಉದಾಹರಣೆಗಳಿತ್ತು. ಅಂದಿನಿಂದ ಈ ಯೋಜನೆ ನನ್ನಲ್ಲಿತ್ತು ಎಂದು ಕೃಪಾ ಆಳ್ವಾ ಹೇಳಿದ್ದಾರೆ.  
ಕಳೆದ 10-25 ವರ್ಷಗಳ ನೋಂದಣಿ, ದಾಖಲಾತಿಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಹಳೆಯ ವಿದ್ಯಾರ್ಥಿಗಳ ಸಂಘಟನೆಯನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com