ನಮ್ಮ ಮೆಟ್ರೊ: ಔಟರ್ ರಿಂಗ್ ರಸ್ತೆ ಸಂಪರ್ಕ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಅಸ್ತು

ಬಹು ನಿರೀಕ್ಷಿತ ನಮ್ಮ ಮೆಟ್ರೊ ಔಟರ್ ರಿಂಗ್ ರಸ್ತೆ ಸಂಚಾರಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಬಹು ನಿರೀಕ್ಷಿತ ನಮ್ಮ ಮೆಟ್ರೊ ಔಟರ್ ರಿಂಗ್ ರಸ್ತೆ ಸಂಚಾರಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಐಟಿ ವಲಯಗಳಿಗೆ ಉತ್ತೇಜನ ಸಿಗಲಿದ್ದು ಸಾಕಷ್ಟು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಕ್ಕಿದಂತಾಗುತ್ತದೆ ಎಂದು ಮೆಟ್ರೊ ಅಧಿಕಾರಿಗಳು ತಿಳಿಸಿದ್ದಾರೆ.
17 ಕಿಲೋ ಮೀಟರ್ ಉದ್ದದ 4,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಔಟರ್ ರಿಂಗ್ ರಸ್ತೆ ಮೂಲಕ ಕೆಆರ್ ಪುರಂನಿಂದ ಸಿಲ್ಕ್ ಬೋರ್ಡ್ ಗೆ ಸಂಪರ್ಕ ಕಲ್ಪಿಸಲಿದೆ.ಕೆಆರ್ ಪುರಂ ಮತ್ತು ಸಿಲ್ಕ್ ಬೋರ್ಡ್ ನಲ್ಲಿ ಎರಡು ಅಂತರ ಬದಲಾವಣೆಯಾಗಲಿದೆ. ಇದು ಬೈಯಪ್ಪನಹಳ್ಳಿಯಿಂದ ಎಂ.ಜಿ.ರಸ್ತೆಗೆ ಮತ್ತು ಆರ್ ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸಲಿದೆ.
ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಔಟರ್ ರಿಂಗ್ ರಸ್ತೆ ಮೂಲಕ ಮೆಟ್ರೋ ನಗರದ ಎರಡು ಪ್ರಮುಖ ಕೇಂದ್ರಗಳನ್ನು ಸಂಪರ್ಕಿಸಲಿದೆ. ವೈಟ್ ಫೀಲ್ಡ್ ನಿಂದ ಎಲೆಕ್ಟ್ರಾನಿಕ್ ಸಿಟಿಗೆ  ಸಂಪರ್ಕ ಕಲ್ಪಿಸಲಿದ್ದು 2020ರ ವೇಳೆಗೆ ಸಂಚಾರ ಆರಂಭವಾಗಲಿದೆ ಎಂದು ಹೇಳಿದರು.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮೆಟ್ರೊಗೆ ಹತ್ತಿದ ಪ್ರಯಾಣಿಕ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಇಳಿದು ಅಲ್ಲಿಂದ ಮೆಟ್ರೊ ಸಂಪರ್ಕ ಮಾರ್ಗದ ಮೂಲಕ ಕೆಆರ್ ಪುರಂ ಹೋಗಬಹುದು. ಅಲ್ಲಿಂದ ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ ಗೆ ಹೋಗುವ ಮೆಟ್ರೊದಲ್ಲಿ ಸಂಚರಿಸಬಹುದು ಎಂದು ಮಹೇಂದ್ರ ಜೈನ್ ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com