
ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಊಟ ಕೊಡಿಸುವುದಾಗಿ ಹೇಳಿ ಹೂ ಮಾರುವ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಹದಿಮೂರು ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ. ಬುಧವಾದ ಮಧ್ಯಾಹ್ನ ಕರೆದೊಯ್ದು ದುಷ್ಕರ್ಮಿಯೊಬ್ಬ ಈ ಕೃತ್ಯ ನಡೆಸಿದ್ದಾನೆ.
ಊಟ ಕೊಡಿಸುತ್ತೇನೆಂದು ಆಸೆ ತೋರಿಸಿ ಕರೆದೊಯ್ದ ಕಿಡಿಗೇಡಿ ಆ ಬಳಿಕ ರಾಜನಗುಂಟೆ- ದೊಡ್ಡಬಳ್ಳಾಪುರ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಹೇಳಲಾಗಿದೆ.
ಅದಾದ ನಂತರ ವಾಪಸ್ ಸಂಜಯನಗರಕ್ಕೆ ಕರೆದುಕೊಂಡು ಬಂದು ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ನಂತರ ಬಾಲಕಿ ತನ್ನ ಪೋಷಕರ ಬಳಿ ಹೇಳಿದ್ದಾಳೆ. ನಂತರ ಬಾಲಕಿ ಪೋಷಕರು ಸಂಜಯನಗರ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Advertisement