ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.
ಬೆಂಗಳೂರಿನ ಚಾಮರಾಜ್ ಪೇಟೆ, ಬಸವನ ಗುಡಿ, ಟೌನ್ ಹಾಲ್, ವಿಧಾನಸೌಧ, ಶಾಂತಿನಗರ ಸೇರಿದಂತೆ ಎಡಬಿಡದೆ ಭಾರೀ ಮಳೆ ಸುರಿಯುತ್ತಿದೆ.
ಭಾರೀ ಮಳೆಯಿಂದಾಗಿ ಮೆಜೆಸ್ಟಿಕ್, ಗಾಂಧಿನಗರ, ಶಿವಾಜಿನಗರ ಸೇರಿದಂತೆ ನಗರದ ವಿವಿದೆಡೆ ಸಂಚಾರ ದಟ್ಟಣೆ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ವಾಹನ ಸವಾರರು ಮನೆ ತಲುಪಲು ಪರದಾಡುತ್ತಿದ್ದಾರೆ.
ರಸ್ತೆಗಳು ಹಳ್ಳಗಳಂತಾದರೆ, ತಗ್ಗು ಪ್ರದೇಶಗಳು ಕೆರೆಗಳಾಗಿದ್ದು, ರಸ್ತೆ ಯಾವುದು, ಹೊಂಡ ಯಾವುದು ಎಂದು ಗುರುತಿಸಲು ಸಾಧ್ಯವಾಗದೆ ವಾಹನ ಸವಾರರು ಪರದಾಡುತ್ತಿದ್ದಾರೆ.