ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ ಟಿಸಿ) ಬಸ್ ಗಳಲ್ಲಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ ಟಿಸಿ) ಬಸ್ ಗಳಲ್ಲಿ ರಾಜ್ಯಾದ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
ಪರೀಕ್ಷೆಗೆ ತೆರಳುತ್ತಿರುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಉಮಾಶಂಕರ್ ಅವರು ಹೇಳಿದ್ದಾರೆ.
ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಒಟ್ಟು 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 998 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com