ಬೆಂಗಳೂರು ಮ್ಯಾನ್ ಹೋಲ್ ದುರಂತ: ರಾಮ್ಕಿ ಸಂಸ್ಥೆಯ ಮೂವರ ಬಂಧನ

ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೂರು ಪೌರ ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ರಾಮ್ಕಿ ಸಂಸ್ಥೆಯ ಮೂವರು ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೂರು ಪೌರ ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ರಾಮ್ಕಿ ಸಂಸ್ಥೆಯ ಮೂವರು ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಪೊಲೀಸ್ ಠಾಣೆ ಪೊಲೀಸರು, ಮ್ಯಾನ್ ಹೋಲ್ ನಿರ್ವಹಣೆ ಗುತ್ತಿಗೆ ಪಡೆದಿದ್ದ ರಾಮ್ಕಿ ಸಂಸ್ಥೆಯ ಉದ್ಯೋಗಿಗಳಾದ ಬಾಬುರೆಡ್ಡಿ, ಆಂಜನೇಯಲು ಮತ್ತು ಎನ್ ಟಿ ರೆಡ್ಡಿ ಎಂಬುವವರನ್ನು  ಬಂಧಿಸಿದ್ದಾರೆ. ಅಂತೆಯೇ ಪ್ರಕರಣದ ತನಿಖೆ ಮುಂದುವರೆಸಿರುವ ಪೊಲೀಸರು ನಿರ್ಲಕ್ಷ್ಯತೆ ದೂರಿನಡಿಯಲ್ಲಿ ರಾಮ್ಕಿ ಸಂಸ್ಥೆಯ ವಿರುದ್ಧವೂ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದೇ ಮಾರ್ಚ್ 7ರ ಮಧ್ಯರಾತ್ರಿ ಕಗ್ಗದಾಸಪುರ ಮುಖ್ಯರಸ್ತೆಯಲ್ಲಿನ ಮ್ಯಾನ್ ಹೋಲ್ ದುರಸ್ತಿ ಮಾಡಲು ಒಳಗೆ ಹೋಗಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದರು. ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಸರಿಯಾದ ಕ್ರಮ  ಮತ್ತು ಪೌರ ಕಾರ್ಮಿಕರ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಸಾರ್ವಜನಿಕರ ವಲಯದಲ್ಲಿ ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಸಾರ್ವಜನಿಕರ ವಿರೋಧದ ಬಳಿಕ ಎಚ್ಚೆತ್ತಿದ್ದ ಸರ್ಕಾರ ಪ್ರಕರಣದ ತನಿಖೆಗೆ  ಆದೇಶಿಸಿತ್ತು.

ಬೆಂಗಳೂರು ಮೇಯರ್ ಹಾಗೂ ನಗರಾಭಿವೃದ್ಧಿ ಸಚಿವರು ಪೊಲೀಸ್ ತನಿಖೆಗೆ ಆದೇಶಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿದೆ ಸೂಚಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com