
ಬೆಂಗಳೂರು: ನಗರದ ಹೊರವಲಯದ ಹೊಸೂರು ಮುಖ್ಯ ರಸ್ತೆಯ ಬಿಟಿಎಲ್ ಕಾಲೇಜು ಬಳಿ ಪುರಸಭೆ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಆನೇಕಲ್ ತಾಲೂಕಿನ ಬೊಮ್ಮಸಂದ್ರ ಪುರಸಭೆಯ ಬಿಜೆಪಿ ಸದಸ್ಯ ಕಿತ್ತಗಾನಹಳ್ಳಿ ವಾಸು ಕೊಲೆಯಾದ ವ್ಯಕ್ತಿ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಕಾರಿನಲ್ಲಿ ತೆರಳುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಕೊಲೆಯಾದ ವಾಸು ಆನೇಕಲ್ ತಾಲೂಕಿನ ಬಿಜೆಪಿ ಮುಖಂಡರಾಗಿದ್ದು, ಇವರ ಪತ್ನಿ ಜಿಲ್ಲಾ ಪಂಚಾಯ್ತಿ ಸದಸ್ಯೆಯಾಗಿದ್ದಾರೆ. ಈ ಸಂಬಂಧ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Advertisement