ಬೆಂಗಳೂರು: ಅರುಣಾಚಲ ವಿದ್ಯಾರ್ಥಿ ಮೇಲೆ ಹಲ್ಲೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

: ಅರುಣಾಚಲ ವಿದ್ಯಾರ್ಥಿ ಮೇಲಿನ ಹಲ್ಲೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ಅರುಣಾಚಲ ವಿದ್ಯಾರ್ಥಿ ಮೇಲಿನ ಹಲ್ಲೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.

ವಿದ್ಯಾರ್ಥಿ ಮೇಲೆ ನಡೆದ ಹಲ್ಲೆ ಆಘಾತಕಾರಿ, ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಿದ್ದು, ಅವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ವಿದ್ಯಾರ್ಥಿ ಮೇಲೆ ಹಲ್ಲೆ ನಡೆದಿರುವುದು ದುಃಖಕರ ಸಂಗತಿ ಎಂದು ಕೇಂದ್ರ ಗೃಹಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಬೇಸರ ವ್ಯಕ್ತ ಪಡಿಸಿದ್ದಾರೆ.

ವಿದೇಶದಲ್ಲಿರುವ ಭಾರತ ಮೂಲದವರ ಸುರಕ್ಷತೆ ಬಗ್ಗೆ ನಾವು ಮಾತನಾಡುತ್ತಿರುವಾಗ ನಮ್ಮ ದೇಶದಲ್ಲೇ ಹಲ್ಲೆ ಪ್ರಕರಣಗಳು ನಡೆಯುತ್ತಿರುವುದು ದುಃಖಕರ ಎಂದು ಹೇಳಿದ್ದಾರೆ.

ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗೃಹ ಇಲಾಖೆಯೂ ಗಮನ ಹರಿಸಿದೆ ಎಂದು ಅವರು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com