ಕಪ್ಪತ ಗುಡ್ಡ
ಕಪ್ಪತ ಗುಡ್ಡ

ವಿವಾದಿತ ಕಪ್ಪತಗುಡ್ಡ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ: ಹೈಕೋರ್ಟ್

ವಿವಾದಿತ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಣೆ ಮಾಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ...

ಬೆಂಗಳೂರು: ವಿವಾದಿತ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಣೆ ಮಾಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಗುರುವಾರ ಇತ್ಯರ್ಥಪಡಿಸಿದ್ದು, ವನ್ಯಜೀವಿ ಮಂಡಳಿಯೆದುರು ಪ್ರಕರಣ ಬಾಕಿ ಇರುವಾಗ ನ್ಯಾಯಾಲಯ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ತಿಳಿಸಿದೆ.

ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಿಸದಂತೆ ತಡೆಯಲು ನಿರ್ದೇಶಿಸಬೇಕು ಎಂಬ ವಿಷಯದಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು  ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಕಪ್ಪತಗುಡ್ಡ ತಪ್ಪಲಿನಲ್ಲಿರುವ ರೈತರು ಹಾಗೂ ಕೃಷಿ ಕಾರ್ಮಿಕರ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ದಾಸರ ಹಾಗೂ ಬಸವಣ್ಣಯ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌)ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಲೇವಾರಿ ಮಾಡಿದೆ.

ಸಭೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಇರಲಿಲ್ಲ. ಆಕ್ಷೇಪಣೆ ಸಲ್ಲಿಸಲೂ ಸಮಯಾವಕಾಶ ದೊರೆತಿರಲಿಲ್ಲ. ಆದ್ದರಿಂದ ಈ ಸಭೆಯಲ್ಲಿ ಮೂಡಿಬಂದ ಅಭಿಪ್ರಾಯದ ಅನುಸಾರ ಸರ್ಕಾರ ಕಪ್ಪತಗುಡ್ಡ ಅರಣ್ಯ ಪ್ರದೇಶವನ್ನು ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಿಸಿದಂತೆ ತಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು  ಕೋರಿದರು.

ಇದಕ್ಕೆ ಬಲವಾದ ಆಕ್ಷೇಪ ವ್ಯಕ್ತಪಡಿಸಿದ ಅಡ್ವೊಕೇಟ್ ಜನರಲ್‌ ಎಂ.ಆರ್.ನಾಯಕ್ ಅವರು, ಈ ಪಿಐಎಲ್‌ ಹಿಂದೆ ಗಣಿಗಾರಿಕೆ ಕಂಪೆನಿಗಳ ಲಾಬಿ ಕೆಲಸ ಮಾಡಿದೆ. ಅರ್ಜಿ ದುರುದ್ದೇಶದಿಂದ ಕೂಡಿದೆ ಎಂದರು. ಸರ್ಕಾರ ಈ ವಿಷಯದಲ್ಲಿ ಇನ್ನೂ ಅಂತಿಮ ಅಧಿಸೂಚನೆ ಹೊರಡಿಸಿಲ್ಲ. ಸದ್ಯ ಈ ವಿಷಯ ರಾಜ್ಯ ವನ್ಯಜೀವಿ ಮಂಡಳಿ ಮುಂದಿದೆ. ಆದ್ದರಿಂದ ಇದನ್ನು ವಜಾ ಮಾಡಬೇಕು ಎಂದು ಮನವಿ ಮಾಡಿದರು.

Related Stories

No stories found.

Advertisement

X
Kannada Prabha
www.kannadaprabha.com