ಯಾದಗಿರಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಉತ್ತರ ಪ್ರದೇಶದಲ್ಲಿ ಬಹುಮತ ಪಡೆದಿರುವುದರಿಂದ ಸಿಎಂ ಆಯ್ಕೆ ಆ ಪಕ್ಷದ ಆಂತರಿಕ ವಿಚಾರವಾಗಿದೆ. ಆದರೆ ಆದಿತ್ಯನಾಥ ಅನೇಕ ಬಾರಿ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಹಿಂಸೆಗಳಿಗೆ ಪ್ರಚೋದನೆ ನೀಡಿದ್ದಾರೆ. ಇಂತವರು ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.