ಕರ್ನಾಟಕ: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 120 ಪಿಜಿ ಸೀಟುಗಳ ಹೆಚ್ಚಳ

ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಈ ವರ್ಷ ಖುಷಿಪಡುವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಈ ವರ್ಷ ಖುಷಿಪಡುವ ವಿಷಯವೊಂದಿದೆ. ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ರಾಜ್ಯದ ಆಯ್ದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಠ 120 ಅಧಿಕ ಸೀಟುಗಳನ್ನು ಸೇರಿಸಲಾಗಿದೆ.  ಈ ಕುರಿತು ಭಾರತೀಯ ವೈದ್ಯಕೀಯ ಮಂಡಳಿಯಿಂದ ಅಧಿಕೃತ ಮಾಹಿತಿ ಬರುವ ನಿರೀಕ್ಷೆಯಿದೆ.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 38 ಅಧಿಕ ಸೀಟುಗಳು ಲಭ್ಯವಿರುವ ಬಗ್ಗೆ ಈಗಾಗಲೇ ಭಾರತೀಯ ವೈದ್ಯಕೀಯ ಮಂಡಳಿಯಿಂದ ಮಾಹಿತಿ ಬಂದಿದೆ. ಇನ್ನು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೂಡ ಮೂರು ಸೀಟುಗಳಿವೆ ಎನ್ನಲಾಗಿದೆ. ಮುಂದಿನ ಮಾಹಿತಿ ಕಾಲೇಜುಗಳು ಮತ್ತು ಸೀಟು ಲಭ್ಯತೆ ಕುರಿತು ಈ ತಿಂಗಳಾಂತ್ಯದಲ್ಲಿ ತಿಳಿದುಬರಲಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಸಚಿದಾನಂದ ತಿಳಿಸಿದ್ದಾರೆ.
 ವೈದ್ಯಕೀಯ ಶಿಕ್ಷಣ ಲಭ್ಯವಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಹೆಚ್ಚಳ ಮಾಡಲು ಇಲಾಖೆ ಪ್ರಯತ್ನಿಸುತ್ತಿದೆ ಎಂದರು.
ಮೈಸೂರು ವೈದ್ಯಕೀಯ ಶಿಕ್ಷಣ ಸಂಸ್ಥೆ ಮೈಸೂರು, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಬಳ್ಳಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಶಿವಮೊಗ್ಗ ಮತ್ತು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಸನಗಳಲ್ಲಿ ಸೀಟು ಅಧಿಕವಾಗುವ ಸಾಧ್ಯತೆಯಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಲಭ್ಯತೆಯನ್ನು ಹೆಚ್ಚಿಸಲಾಗುವುದು ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಇದರ ಲಾಭ ದೊರಕಲಿದೆ.
ಪ್ರತಿವರ್ಷ ಕರ್ನಾಟಕದಲ್ಲಿ ವೈದ್ಯಕೀಯ ಶಿಕ್ಷಣ ಅಪೇಕ್ಷಣೀಯರ ಸಂಖ್ಯೆ ಸೀಟು ಲಭ್ಯತೆಗಿಂತ 5 ಪಟ್ಟು ಹೆಚ್ಚಾಗಿರುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com