ಕಾರ್ಪೊರೇಟರ್ ಮನೆ ಮುಂದೆ ನಿಲ್ಲಿಸಿದ್ದ ಬೈಕ್'ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಆಯ್ಕೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗದಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿಯೇ ರಾಜಕೀಯ ಅಸಮಾಧಾನ ಸ್ಫೋಟಗೊಂಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಆಯ್ಕೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗದಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿಯೇ ರಾಜಕೀಯ ಅಸಮಾಧಾನ ಸ್ಫೋಟಗೊಂಡಿದೆ.  
ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಆಯ್ಕೆಗೆ ಏಪ್ರಿಲ್ 5 ದಿನಾಂಕ ನಿಗದಿ ಮಾಡಲಾಗದೆ. ಹೀಗಾಗಿ ಪಾಲಿಕೆ ಸೂತ್ರ ಹಿಡಿರುವ ಆಡಳಿತರೂಢ ಪಕ್ಷವಾದ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಜೋರಾಗಿಯೇ ನಡೆಯುತ್ತಿವೆ.
ಇದರ ನಡುವೆ ಕೌಲ್ ಬಜಾಲ್ ನಲ್ಲಿರುವ ಕಾಂಗ್ರೆಸ್ ಕಾರ್ಪೊರೇಟರ್ ದಿವ್ಯಾಕುಮಾರ್ ಅವರ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಬೆದರಿಕೆ ಹಾಕಿ ಮನೆ ಮುಂದೆ ನಿಲ್ಲಿಸಿದ್ದ 2 ಬೈಕ್ ಗಳಿಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಘಟನಾ ಸಂದರ್ಭದಲ್ಲಿ ದಿವ್ಯಾಕುಮಾರಿಯವರು ಮನೆಯಲ್ಲಿ ಇರಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ದಿವ್ಯಾ ಅವರ ಜಾತಿಯನ್ನು ಹಿಡಿದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು ಎಂದು ತಿಳಿದುಬಂದಿದೆ. 
ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com