ಕರ್ನಾಟಕ: ನೀಟ್ ನಡೆಸಲು ಮಸೂದೆಗೆ ಒಪ್ಪಿಗೆ

ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳು (ಶುಲ್ಕ ಪ್ರವೇಶ ಮತ್ತು ನಿರ್ಧಾರ ನಿಯಂತ್ರಣ) (ತಿದ್ದುಪಡಿ) ಮಸೂದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳು (ಶುಲ್ಕ ಪ್ರವೇಶ ಮತ್ತು ನಿರ್ಧಾರ ನಿಯಂತ್ರಣ) (ತಿದ್ದುಪಡಿ) ಮಸೂದೆ 2017ಕ್ಕೆ ರಾಜ್ಯ ವಿಧಾನಸಭೆ ನಿನ್ನೆ ಅನುಮತಿ ನೀಡಿದೆ.
ಈ ಮಸೂದೆಯಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ನಡೆಸಲು ಅನುವು ಮಾಡಿಕೊಡುತ್ತದೆ.
ನೀಟ್ ಮಾರ್ಗಸೂಚಿ ಪ್ರಕಾರ ಕೇಂದ್ರದಲ್ಲಿ ಒಂದೇ ಕೌನ್ಸೆಲಿಂಗ್ ನಡೆಸಲು ಸರ್ಕಾರಕ್ಕೆ ಅನುವು ಮಾಡಿಕೊಡಲಿದ್ದು, ಖಾಸಗಿ ಅಥವಾ ಸ್ವಾಯತ್ತ ವಿಶ್ವವಿದ್ಯಾಲಯಗಳನ್ನು ವೃತ್ತಿಪರ ಶೈಕ್ಷಣಿಕ ಸಂಸ್ಥೆಗಳ ವ್ಯಾಖ್ಯಾನಕ್ಕೆ ಸೇರಿಸಲು ಸಾಧ್ಯವಾಗುತ್ತದೆ.
ಮಸೂದೆ ಅಂಗೀಕಾರಗೊಂಡರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ಕೇಂದ್ರ ಸರ್ಕಾರ ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಕೂಡ ನೀಟ್ ನ್ನು ಜಾರಿಗೆ ತರಲು ಯೋಚಿಸುತ್ತಿದೆ. ಆದರೆ ಈ ಕುರಿತು ಅಂತಿಮ ನಿರ್ಧಾರಕ್ಕೆ ಬಂದಿಲ್ಲ.
ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ನ್ನು ನಡೆಸದಿದ್ದರೆ ರಾಜ್ಯ ಸರ್ಕಾರ ಸಿಇಟಿ ನಡೆಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com