ರಾಜ್ಯದ ವೈದ್ಯರು ವೈದ್ಯಕೀಯ ವಿಜ್ಞಾನದಲ್ಲಾಗುತ್ತಿರುವ ಬದಲಾವಣೆ ಹಾಗೂ ಸಂಶೋಧನೆಗಳ ಕುರಿತು ಜ್ಞಾನ ಹೊಂದುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಹಾಗೂ ನಕಲಿ ವೈದ್ಯರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ನೋಂದಣಿ ವಿಧಾಯಕಕ್ಕೆ ಕೆಲವೊಂದು ತಿದ್ದುಪಡಿಗಳನ್ನು ಸರ್ಕಾರ ಮಾಡಿದೆ. ಈ ತಿದ್ದುಪಡಿ ವಿಧೇಯಕವು ನಿನ್ನೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದು, ವಿಧೇಯಕದಂತೆ, ಇನ್ನು ಮುಂದೆ ರಾಜ್ಯದ ವೈದ್ಯರು ಸರ್ಕಾರದ ಬಳಿ ನೋಂದಣಿ ಮಾಡಿಸಿಕೊಳ್ಳಬೇಕಿದ್ದು, ನೋಂದಣಿಯಾದ ಬಳಿಕ ಆಧಾರ್ ಹಾಗೂ ಬಯೋಮೆಟ್ರಿಕ್ ವಿವರಗಳನ್ನು ಸಲ್ಲಿಸುವ ಮೂಲಕ ಪ್ರತೀ ಐದು ವರ್ಷಕ್ಕೊಮ್ಮೆ ನೋಂದಣಿಯನ್ನು ನವೀಕರಣ ಮಾಡಿಸಿಕೊಳ್ಳಬೇಕಿದೆ.