ಸಿಬಿಎಸ್ಇ, ಐಸಿಎಸ್ಇ ಶಾಲೆಗಳಿಗೆ ಕಡಿವಾಣ ಹಾಕಲು ಕಾಯ್ದೆ

ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳನ್ನು ರಾಜ್ಯ ಸರ್ಕಾರ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ 2016ರಲ್ಲಿ ರೂಪಿಸಿರುವ ಮಕ್ಕಳ ಸುರಕ್ಷತೆ ನೀತಿ ಅನ್ವಯ 1983ಕ್ಕೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ...
ವಿಧಾನಸೌಧ
ವಿಧಾನಸೌಧ
ಬೆಂಗಳೂರು: ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳನ್ನು ರಾಜ್ಯ ಸರ್ಕಾರ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ 2016ರಲ್ಲಿ ರೂಪಿಸಿರುವ ಮಕ್ಕಳ ಸುರಕ್ಷತೆ ನೀತಿ ಅನ್ವಯ 1983ಕ್ಕೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. 
ಇತ್ತೀಚೆಗೆ ತುಮಕೂರು ಜಿಲ್ಲೆಯ ಸಿಬಿಎಸ್ಇ ವಸತಿ ಶಾಲೆಯೊಂದರಲ್ಲಿ ವಿಷ ಆಹಾರ ಸೇವಿಸಿ ಮಕ್ಕಳು ಮೃತಪಟ್ಟ ಪ್ರಕರಣದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಶಿಕ್ಷಣ ನೀತಿಗೆ ತಿದ್ದುಪಡಿ ತರಲು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 1983 ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿರುವ ಸಿಬಿಎಸ್ಇ ಮತ್ತು ಐಸಿಎಸ್ಇ ಪಠ್ಯಕ್ರಮದ ಖಾಸಗಿ ಶಾಲೆಗಳ ಮೇಲೆ ನಿಯಂತ್ರಣ ಸಾಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. 
ಪ್ರಸ್ತುತ ಸಿಬಿಎಸ್ಇ ಮತ್ತು ಐಸಿಎಸ್ಇ ಶಿಕ್ಷಣ ಸಂಸ್ಥೆಗಳ ಮೇಲೆ ರಾಜ್ಯ ಸರ್ಕಾರಕ್ಕೆ ಯಾವುದೇ ಹಿಡಿತವಿರಲಿಲ್ಲ. ಹೀಗಾಗಿ ಒಂದು ಬಾರಿ ನಿರಾಕ್ಷೇಪಣಾ ಪತ್ರ ಪಡೆದ ಬಳಿಕ ಆ ಶಾಲೆಗಳು ತಮ್ಮಿಷ್ಟಕ್ಕೆ ಬಂದಂತೆ ಕಾರ್ಯನಿರ್ವಹಿಸುತ್ತಿದ್ದವು. ತಿದ್ದುಪಡಿ ವಿಧೇಕದ ಅನ್ವಯ ಸಿಬಿಎಸ್ ಮತ್ತು ಐಸಿಎಸ್ಇ ಶಾಲೆಗಳು ವಸೂಲಿ ಮಾಡುತ್ತಿರುವ ಶುಲ್ಕದ ಮೇಲೆ ನಿಯಂತ್ರಣ, ಶಿಕ್ಷಕರ ಸೇವಾ ಸಂಬಂಧಿ ವಿಚಾರಗಳಲ್ಲಿ ಸರ್ಕಾರದ ಮೇಲ್ವಿಚಾರಣೆ ಮತ್ತು ಇಂತಹ ಶಾಲೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ವಸತಿ ಸಹಿತ ಶಾಲೆಗಳಲ್ಲಿ ಮಕ್ಕಳ ಭದ್ರತೆ ಮತ್ತು ಸುರಕ್ಷತೆ ವಿಚಾರವಾಗಿ ಸರ್ಕಾರದ ಮುಕ್ತ ಪ್ರವೇಶಕ್ಕೆ ಅವಕಾಶ ದೊರಕಲಿದೆ. 
ಶಿರಾದಲ್ಲಿ ಅತ್ಯಾಧುನಿಕ ವಧಾಗಾರ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚೀಲನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಮಗದ ಮೂಲಕ ಅತ್ಯಾಧುನಿಕ ತಂತ್ರಜ್ಞಾನದ ಮತ್ತು ಮಾನವ ರಹಿತ ಅತ್ಯಾಧುನಿಕ ಕುರಿ ಮತ್ತು ಮೇಕೆಗಳ ವಧಾ ಕೇಂದ್ರ ಸ್ಥಾಪಿಸಲು ಸಚಿವ ಸಂಪುಟಸಭೆ ಅನುಮೋದನೆ ನೀಡಿದೆ. 

ಅತ್ಯಾಧುನಿಕ ವಧಾ ಕೇಂದ್ರ ಸ್ಥಾಪಿಸುವ ಕುರಿತು ರಾಷ್ಟ್ರೀದ ಹೆದ್ದಾರಿಗೆ ಹೊಂದಿಕೊಂಡಂತೆ ಚೀಲನಹಳ್ಳಿ ಗ್ರಾಮದ ಬಳಿ 20 ಎಕರೆ ಜಮೀನನ್ನು 7 ವರ್ಷದ ಹಿಂದೆಯೇ ಮೀಸಲಿಡಲಾಗಿತ್ತು. ಇದೀಗ ಸುಮಾರು ರೂ.20 ಕೋಟಿ ವೆಚ್ಚದಲ್ಲ ಆ ಜಾಗದಲ್ಲಿ ಅತ್ಯಾಧುನಿಕ ವಧಾಕೇಂದ್ರ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಸರ್ಕಾರದ ನಿರ್ಧಾರದಿಂದ ಆ ಭಾಗದಲ್ಲಿ ಕುರಿ ಸಾಕಣೆ ಅಭಿವೃದ್ಧಿ ಜೊತೆಗೆ ಕುರಿ, ಮೇಕೆ ಮಾಂಸಗಳ ರಫ್ತಿಗೂ ಅನುಕೂಲವಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com