

ಬೆಂಗಳೂರು: ಗುತ್ತಿಗೆದಾರರೊಬ್ಬರಿಂದ 15 ಲಕ್ಷ ರು. ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಎಂಬುವರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಮಂಜುನಾಥ್ ನಗರ ವಾರ್ಡ್ನ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಅವರು ಗುತ್ತಿಗೆದಾರರೊಬ್ಬರ ಬಳಿಯಿಂದ 15 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ದಾಳಿ ನಡೆಸಿದೆ.
ಎಸಿಬಿ ಎಸ್‌ಪಿ ಗಿರೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿ ಬಳಿಕ ಕೃಷ್ಣಮೂರ್ತಿ ಬಂಧಿಸಲಾಗಿದೆ. ಮಂಜುನಾಥ್ ನಗರ ವಾರ್ಡ್ ನಲ್ಲಿ ಸರ್ಕಾರಿ ಕಟ್ಟಡ ನಿರ್ಮಾಣಕ್ಕಾಗಿ ಗುತ್ತಿಗೆದಾರನಿಂದ ಕೃಷ್ಣಮೂರ್ತಿ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಚುನಾಯಿತ ಪ್ರತಿನಿಧಿಯೊಬ್ಬರು ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.