ಕಳಪೆ ಹಾಜರಾತಿ: 19 ಸಾವಿರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ವಂಚಿತ

ಕಡಿಮೆ ಹಾಜರಾತಿಯ ಕಾರಣ ಸುಮಾರು 19 ಸಾವಿರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವುದರಿಂದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಡಿಮೆ ಹಾಜರಾತಿಯ ಕಾರಣ ಸುಮಾರು 19 ಸಾವಿರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವುದರಿಂದ ವಂಚಿತರಾದ್ದಾರೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ಪ್ರಕಾರ, ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಹಾಜರಾತಿ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. ಕಳೆದ ವರ್ಷ
 18,785 ವಿದ್ಯಾರ್ಥಿಗಳು ಪರೀಕ್ಷೆ ಬರೆದಿರಲಿಲ್ಲ, ಈ ವರ್ಷ 19,306 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಪ್ರತಿಯೊಬ್ಬ ವಿದ್ಯಾರ್ಥಿಯು ಶೇ,75 ರಷ್ಟು ಹಾಜರಾತಿ ಹೊಂದಿರಬೇಕು, ಇಲ್ಲದಿದ್ದರೇ ಅಂಥಹ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಹೇಳಿದೆ.

ಇತ್ತೀಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಗಳು ಕಡಿಮೆ ಹಾಜರಾತಿಯಿಂದ ಪರೀಕ್ಷೆ ಬರೆದಿರಲಿಲ್ಲ.ಕೆಲ ವಿದ್ಯಾರ್ಥಿಗಳು ಹಾಜರಾತಿಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಎಲ್ಲೋ ಕೆಲವು ವಿದ್ಯಾರ್ಥಿಗಳಿಗೆ ಮಾತ್ರ ಆರೋಗ್ಯ ಸಮಸ್ಯೆ ಇರುತ್ತದೆ. ಅಂಥ ಮಕ್ಕಳು ವೈದ್ಯರ ಪ್ರಮಾಣ ಪತ್ರವನ್ನು ಮುಖ್ಯ ಶಿಕ್ಷಕರಿಗೆ ಸಲ್ಲಿಸಿ ಪ್ರವೇಶ ಪತ್ರ ಪಡೆಯಬಹುದಾಗಿದೆ. ಒಂದು ವೇಳೆ ಪ್ರಮಾಣ ಪತ್ರನಕಲಿ ಎಂದು ಗೊತ್ತಾದರೇ ಅಂತವುಗಳನ್ನು ತಿರಸ್ಕರಿಸಲಾಗುವುದು ಎಂದು ಪರೀಕ್ಷಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಪ್ರತಿ ವರ್ಷ ಸುಮಾರು 13 ಸಾವಿರ ವಿದ್ಯಾರ್ಥಿಗಳು ಕಡಿಮೆ ಹಾಜರಾತಿಯ ಕಾರಣ ಪರೀಕ್ಷೆಯಿಂದ ವಂಚಿತರಾಗುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com