ಬೆಂಗಳೂರು: ಗಾಯಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಓಲಾ ಕ್ಯಾಬ್ ಚಾಲಕನ ಬಂಧನ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ಗಾಯಕಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಓಲಾ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ಗಾಯಕಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಓಲಾ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಈ ಸಂಬಂಧ ದೂರು ದಾಖಲಿಸಿದ್ದ ಮಹಿಳೆ ಮತ್ತೆ ಸಂಪರ್ಕಕ್ಕೆ ಸಿಗುತ್ತಿಲ್ಲ. 
ಕೋರಮಂಗಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಓಲಾ ಕಂಪೆನಿಯ ಟ್ಯಾಕ್ಸಿ ಚಾಲಕ ಎಂ.ರವಿಕುಮಾರ್‌ನನ್ನು ಬೊಮ್ಮನಹಳ್ಳಿ ಪೊಲೀಸರು  ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಬೇಗೂರಿನಲ್ಲಿರುವ ತಮ್ಮ ಮನೆಗೆ ಕ್ಯಾಬ್ ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವ 2.30 ರ ವೇಳೆಗೆ ಕಾರು ನಿಲ್ಲಿಸಿದ ಚಾಲಕ ರವಿ ಕುಮಾರ್ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ನಂತರ ಕಾರು ಸ್ಟಾರ್ಟ್ ಮಾಡಿದ್ದಾನೆ. ಈ ವೇಳೆ ಅಪಾಯವನ್ನರಿತ ಯುವತಿ ಕಾರಿನಿಂದ ಜಂಪ್ ಮಾಡಿದ್ದಾರೆ. ಆಕೆಯನ್ನು ರವಿಕುಮಾರ್ ಹಿಂಬಾಲಿಸಿದಾಗ, ಪಕ್ಕದಲ್ಲೇ ಇದ್ದ ಆಸ್ಪತ್ರೆಗೆ ತೆರಳಿದ ಯುವತಿ ಅಲ್ಲಿನ ಸೆಕ್ಯೂರಿಟಿ ಗಾರ್ಡ್ ಗೆ ತಿಳಿಸಿದ್ದಾಳೆ. ಆಸ್ಪತ್ರೆಗ ಒಳಗೆ ತೆರಳಿದ ಯುವತಿ ನಂತರ ಅಲ್ಲಿಂದ ಬೇರೊಂದು ಟ್ಯಾಕ್ಸಿಯಲ್ಲಿ ಮನೆಗೆ ತೆರಳಿ ಶನಿವಾರ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು 
ದೂರಿನ ಆಧಾರದ ಮೇಲೆ ರವಿಕುಮಾರ್ ನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದೂರ ಆಗುವ ಮಾರ್ಗದಲ್ಲಿ ಕರೆದೊಯ್ಯುತ್ತಿರುವುದಾಗಿ ನನ್ನೊಂದಿಗೆ ಜಗಳ ಆರಂಭಿಸಿದ ಆಕೆ ಬಸ್ ನಿಲ್ದಾಣದಲ್ಲಿ ಕಾರು ನಿಲ್ಲಿಸುವಂತೆ ಹೇಳಿ ಬಲವಂತವಾಗಿ ಟ್ರಿಪ್ ಕ್ಯಾನ್ಸಲ್ ಮಾಡಿಸಿದರು ಎಂದು ರವಿಕುಮಾರ್ ವಿಚಾರಣೆ ವೇಳೆ ಹೇಳಿದ್ದಾನೆ.
ಕೇಸು ದಾಖಲಿಸಿದ ನಂತರ ಯುವತಿ ಕರೆಗಳನ್ನು ಸ್ವೀಕರಿಸುತ್ತಿಲ್ಲ, ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com