4 ದಿನಗಳ ಬೆಂಗಳೂರು ಆರೋಗ್ಯ ಉತ್ಸವ ಆರಂಭ

ನಗರದ ಅರಮನೆ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳವರೆಗೆ ನಡೆಯಲಿರುವ ಬೆಂಗಳೂರು ಆರೋಗ್ಯ..
ಆರೋಗ್ಯ ಉತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಆರೋಗ್ಯ ಉತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳವರೆಗೆ ನಡೆಯಲಿರುವ ಬೆಂಗಳೂರು ಆರೋಗ್ಯ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಸಂಚಾರ ದಟ್ಟಣೆಯಲ್ಲಿ ಆಂಬ್ಯುಲೆನ್ಸ್ ಸಿಲುಕಿದ್ದು, ಗಮನಕ್ಕೆ ಬರಲಿಲ್ಲ, ಇನ್ನು ಮುಂದೆ ಇಂತಹ ಘಟನೆಗಳಿಗೆ
ಅವಕಾಶ ನೀಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಘಟನೆ ಕುರಿತು ಮಾಧ್ಯಮಗಳಲ್ಲಿ ವಿಷಯ ಪ್ರಕಟವಾದ ನಂತರ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು,ಇದೊಂದು ಅನಿರೀಕ್ಷಿತ ಘಟನೆಯಾಗಿದೆ. ತಾವು ಪ್ರಯಾಣಿಸುವಾಗ ಎದುರಾಗುವ ಆಂಬ್ಯುಲೆನ್ಸ್ ಗಳ ಸಂಚಾರಕ್ಕೆ ತಡೆಯೊಡ್ಡಬಾರದು ಎಂಬುದಾಗಿ ಈ ಹಿಂದೆಯೇ ಆದೇಶಿಸಿರುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com