ಮುಂದಿನ ಪ್ರಕ್ರಿಯೆಯ ಭಾಗವಾಗಿ ಮಸೂದೆಯ ಸಮಗ್ರ ಅಧ್ಯಯನಕ್ಕೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿಕೊಡಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ರಿಯಾಲ್ಟಿ ಮಸೂದೆಯ ಬಗ್ಗೆ ಚರ್ಚೆ ನಡೆದಿದ್ದು, ಯುಡಿಡಿ ಅಭಿಪ್ರಾಯ ಪಡೆದು ತಡ ಮಾಡದೇ ಮಸೂದೆಯನ್ನು ಜಾರಿಗೊಳಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿಬಿ ಜಯಚಂದ್ರ ಹೇಳಿದ್ದಾರೆ.