ಜನವರಿಯಲ್ಲಿ ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೆರೆ ಮಾಲಿನ್ಯಕ್ಕೆ ಇಲಾಖೆಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ವಿವಿಧ ಸಂಘಟನೆಗಳು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮೊರೆ ಹೋಗಿದ್ದವು. ಒಂದು ತಿಂಗಳಲ್ಲಿ ಜಲಮೂಲದ ಪುನರುಜ್ಜೀವನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಎನ್‌ಜಿಟಿ ನಿರ್ದೇಶನ ನೀಡಿತ್ತು. ಕಳೆದ 10 ದಿನಗಳಿಂದ ಕೆರೆಯಲ್ಲಿ ಕಳೆ ತೆಗೆಯುವ ಕೆಲಸ ನಡೆದಿದೆ.