
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಮುಂದಿನ ವಾರ ಪ್ರಕಟಗೊಳ್ಳುವ ಸಾಧ್ಯತೆ ಇದ್ದು, ಈಗಾಗಲೇ ಈ ಸಂಬಂಧ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಈ ಸಂಬಂಧ ಇಂದು ಸಂಜೆ ಮಹತ್ವದ ಸಭೆ ಕರೆದಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟ ದಿನಾಂಕ ಮತ್ತು ಮುಂದಿನ ಕ್ರಮಗಳ ಕುರಿತು ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.
ಕೆಲ ಮಾಧ್ಯಮಗಳಲ್ಲಿ ಮೇ 12 ಅಥವಾ ಮೇ 16ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿ ಮಾಡಲಾಗಿದೆಯಾದರೂ ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕೃತ ಮಾಹಿತಿ ನೀಡಿಲ್ಲ. ಇಂದು ಸಂಜೆ ನಡೆಯುವ ಮಹತ್ವದ ಸಭೆ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ.
Advertisement