ಮಲ್ಟಿಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ವಾರಾಂತ್ಯಗಳಲ್ಲಿ ಅನ್ವಯಿಸುವುದಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಲ್ಟಿಫ್ಲೆಕ್ಸ್ ಗಳಲ್ಲಿ 200 ರು ಟಿಕೆಟ್ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ 10 ದಿನಗಳಾಗಿತ್ತು, ಆದರೆ ವಾರಾಂತ್ಯಗಳಲ್ಲಿ ಮತ್ತು ರಜಾ ದಿನಗಳಲ್ಲಿ ಈ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಲ್ಟಿಫ್ಲೆಕ್ಸ್ ಗಳಲ್ಲಿ 200 ರು ಟಿಕೆಟ್ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ 10 ದಿನಗಳಾಗಿತ್ತು, ಆದರೆ ವಾರಾಂತ್ಯಗಳಲ್ಲಿ ಮತ್ತು ರಜಾ ದಿನಗಳಲ್ಲಿ ಈ ದರ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. 
ಎಲ್ಲ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ಗಳ ದರ ಗರಿಷ್ಠ  200 ಮೀರಬಾರದು ಎಂಬ ರಾಜ್ಯ ಸರ್ಕಾರದ ಆದೇಶ ವಾರಾಂತ್ಯ ಮತ್ತು ರಜಾದಿನಗಳಿಗೆ ಅನ್ವಯ ಆಗುವುದಿಲ್ಲ ಎಂದು ಹೈಕೋರ್ಟ್‌ ಗುರುವಾರ ಸೂಚಿಸಿದೆ.
ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿಎಫ್‌ಐಸಿಸಿಐ ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ ಕುಮಾರ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ  ಮಧ್ಯಂತರ ಆದೇಶ ನೀಡಿದೆ.
ಸರ್ಕಾರದ ಈ ಆದೇಶ ಬಂಡವಾಳ ಹೂಡಿದವರಿಗೆ ತೊಂದರೆ ಉಂಟು ಮಾಡುವಂತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com