SSLC ಫಲಿತಾಂಶ ಪ್ರಕಟ: ಉಡುಪಿ ಮೊದಲು, ಬೀದರ್ ಗೆ ಕೊನೇ ಸ್ಥಾನ

ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರಿಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಗೆ ಅಗ್ರ ಸ್ಥಾನ ಪ್ರಾಪ್ತಿಯಾಗಿದ್ದು, ಬೀದರ್ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ..
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರಿಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಗೆ ಅಗ್ರ ಸ್ಥಾನ ಪ್ರಾಪ್ತಿಯಾಗಿದ್ದು, ಬೀದರ್ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಎಸ್ ಎಸ್ ಎಲ್ ಸಿ ಫಲಿತಾಂಶ ಸಂಬಂಧ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಈ ಬಾರಿ ಶೇ.67.87.ರಷ್ಟು ಫಲಿತಾಂಶ ದಾಖಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರೇ  (2,96,426 ) ಮೇಲುಗೈ ಸಾಧಿಸಿದ್ದು, ಅತಿ ಹೆಚ್ಚು ಫಲಿತಾಂಶ ಪಡೆದ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಸಂಪಾದಿಸಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಹಾಗೂ ಚಿಕ್ಕೋಡಿ ಜಿಲ್ಲೆ ಮೂರನೆ ಸ್ಥಾನ ಪಡೆದಿದೆ. ಇನ್ನು ಶಿರಸಿ  4ನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆ 5ನೇ ಸ್ಥಾನ ಪಡೆದಿದೆ. ಪಟ್ಟಿಯಲ್ಲಿ ಅತ್ಯಂತ ಕನಿಷ್ಠ ಫಲಿತಾಂಶ ಪಡೆದಿರುವ ಬೀದರ್ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ಬಾರಿ, ಶೇ. 8ರಷ್ಟು ಫಲಿತಾಂಶ ಕುಸಿತ ಕಂಡಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಟಾಪರ್ ಲೀಸ್ಟ್‌ಗಳನ್ನು  ಪ್ರಕಟಿಸದಿರಲು ನಿರ್ಧರಿಸಲಾಗಿದೆ. ಅಂತೆಯೇ ಜೂನ್ 15ಕ್ಕೆ ಪೂರಕ ಪರೀಕ್ಷೆ ನಿಗದಿಯಾಗಿದೆ.

ಮೂವರು ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕ ಗಳಿಸಿದ್ದಾರೆ. ಆರು ವಿದ್ಯಾರ್ಥಿಗಳು 624 ಅಂಕ ಗಳಿಸಿದ್ದಾರೆ. 13 ವಿದ್ಯಾರ್ಥಿಗಳು 623 ಅಂಕ ಗಳಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಎಸೆ ಎಸ್ ಎಲ್ ಸಿ ಪರೀಕ್ಷೆಯು  ಮಾರ್ಚ್ 30 ರಿಂದ ಆರಂಭವಾಗಿ ಏಪ್ರಿಲ್ 12ರಂದು ಮುಕ್ತಾಯವಾಗಿತ್ತು. ಒಟ್ಟು 2,770 ಪರೀಕ್ಷಾ ಕೇಂದ್ರಗಳಲ್ಲಿ 8,77,174 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಇಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ವೆಬ್​ ಸೈಟ್​ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು ಈ ವೆಬ್ ಸೈಟ್ ಗಳಲ್ಲಿ kseeb.kar.nic.in, karresults.nic.in ಫಲಿತಾಂಶ ನೋಡಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com