ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಬಿಜಿಎಸ್ ಆಸ್ಪತ್ರೆಗೆ ದಾಖಲು; ವೈದ್ಯರಿಂದ ಸಾಮಾನ್ಯ ಪರೀಕ್ಷೆ

ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರು ಅನಾರೋಗ್ಯದ ನಿಮಿತ್ತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರು ಅನಾರೋಗ್ಯದ ನಿಮಿತ್ತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಶ್ರೀಗಳು ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ಈ ಹಿಂದೆ ತುಮಕೂರಿನ ಮಠದಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಶ್ರೀಗಳ ಆಪ್ತ ಸಿಬ್ಬಂದಿ ಮಠದಿಂದ ಶ್ರೀಗಳ ನಿತ್ಯ ಬಳಕೆಯ ವಸ್ತುಗಳನ್ನು ಆಸ್ಪತ್ರೆಗೆ ತಂದಿರುವುದರಿಂದ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಆಸ್ಪತ್ರೆ ಮೂಲಗಳ ಪ್ರಕಾರ ಶ್ರೀಗಳಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com