ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧುಮಗಳು ಸೇರಿ ಒಟ್ಟು 5 ಮಂದಿ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಧುಮಗಳಾದ ಜ್ಯೋತಿ ವಾಲೀಕಾರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾಳೆ.
ಷಣ್ಮುಖ(35), ಓಂಕಾರ(8) ಚಾಲಕ ಅಮೋಘ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೋರ್ವ ಬಾಲಕಿ 5 ವರ್ಷದ ಭೂಮಿಕಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಳು.
ಸೋಮವಾರ ಮದುವೆ ದಿಬ್ಬಣ ಮುಗಿಸಿಕೊಂಡು ಬರುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೂರು ಜನ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರು. ಈ ವೇಳೆ ಗಾಯಗೊಂಡಿದ್ದ ಮಧುಮಗಳು ಜ್ಯೋತಿ ವಾಲಿಕಾರ(21) ಮಂಗಳವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಸಾವಿಗೀಡಾದವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೋರಟಗಿ ಗ್ರಾಮದವರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಮೊರಟಗಿ ಗ್ರಾಮದಲ್ಲಿ ನೆರವೇರಿತು.