ಮೈಸೂರು ಕೋರ್ಟ್ ಸ್ಫೋಟ ಪ್ರಕರಣ: ಮೂವರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ ಎನ್ಐಎ

ಕಳೆದ ವರ್ಷ ಮೈಸೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕಳೆದ ವರ್ಷ ಮೈಸೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬುಧವಾರ ಮೂವರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದೆ.
ಉಗ್ರ ಕೃತ್ಯಗಳಲ್ಲಿ ಭಾಗಿಯಾದ ಮತ್ತು ನ್ಯಾಯಾಂಗಕ್ಕೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೇಸ್ ಮೂವ್ಮೆಂಟ್ ಸಂಘನೆಯ ಅಬ್ಬಾಸ್ ಅಲಿ, ಎಂ.ಸ್ಯಾಮ್ಸನ್ ಕರೀಮ್ ರಾಜಾ ಹಾಗೂ ಎಸ್ ದಾವೂದ್ ಸುಲೇಮಾನ್ ವಿರುದ್ಧ ಎನ್ಐಎ ಇಂದು ಬೆಂಗಳೂರಿನ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಆರೋಪಿಗಳು ಒಂದು ದೊಡ್ಡ ದಾಳಿಯ ಸಂಚಿನ ಭಾಗವಾಗಿ ಆಗಸ್ಟ್ 1, 2016ರಂದು ಮೈಸೂರಿನ ನ್ಯಾಯಾಲಯದ ಹಿಂಬದಿಯಲ್ಲಿರುವ ಶೌಚಾಲಯದಲ್ಲಿ ಬಾಂಬ್ ಸ್ಫೋಟಿಸಿದ್ದಾರೆ ಎಂದು ಎನ್ ಐಎ ತನ್ನ ಚಾರ್ಜ್ ಶೀಟ್ ನಲ್ಲಿ ಆರೋಪಿಸಿದೆ. 
ಬಾಂಬ್ ಸ್ಫೋಟದಿಂದಾಗಿ ಶೌಚಾಲಯದ ಕಿಟಕಿ, ಬಾಗಿಲುಗಳು ಧ್ವಂಸಗೊಂಡಿತ್ತು. ದಕ್ಷಿಣ ಭಾರತದಲ್ಲಿ ಸಕ್ರಿಯವಾಗಿರುವ ಉಗ್ರ ಸಂಘಟನೆ ಅಲ್-ಉಮಾ 'ಬೇಸ್ ಮೂಮೆಂಟ್' ಎಂದು ತನ್ನ ಹೆಸರನ್ನು ಬದಲಾವಣೆ ಮಾಡಿಕೊಂಡಿದೆ. ಈ ಅಲ್-ಉಮಾ ಸಂಘಟನೆ ಅಲ್‌ ಖೈದಾ ಉಗ್ರ ಸಂಘಟನೆಯ ಒಂದು ಭಾಗವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com