ಬೆಂಗಳೂರು: ಬೆಳ್ಳಂದೂರು ಕೆರೆ ವ್ಯಾಪ್ತಿಯ 114 ಕಾರ್ಖಾನೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. 1974 ರ ಮಾಲಿನ್ಯ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಕಾಯ್ದೆ ಸೆಕ್ಷನ್ 33(ಎ) ಅಡಿಯಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಏಪ್ರಿಲ್ 10 ರಂದು ನೀಡಿದ ಆದೇಶದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಕ್ರಮ ಕೈಗೊಂಡಿದೆ. ಈ ಪ್ರದೇಶದಲ್ಲಿರುವ 114 ಕಾರ್ಖಾನೆಗಳಿಗೆ ಬೆಸ್ಕಾಂ ಈಗಾಗಲೇ ವಿದ್ಯುತ್ ಸಂಪರ್ಕ ನಿಲ್ಲಿಸಿದೆ.
ಬೆಸ್ಕಾಂ ವಿದ್ಯುತ್ ಸ್ಥಗಿತಗೊಳಿಸಿದ್ದು, ಆದರೇ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಧಿಕ್ಕರಿಸಿ ಜನರೇಟರ್ ಬಳಸಿ ಕಾರ್ಖಾನೆ ನಡೆಸಿದರೇ ಕಾಯ್ದೆಯಲ್ಲಿರುವ ಕಾನೂನುಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.