ಮಾಗಡಿ ರಸ್ತೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಖಾಸಗಿ ಕಂಪನಿ ಉದ್ಯೋಗಿಯ ಪುತ್ರ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಬಾಲಕ ಫೇಸ್ಬುಕ್ ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ ಇದಕ್ಕೆ 2016 ಜೂನ್ ನಲ್ಲಿ ತೇಜಲ್ ಪಾಟೀಲ್ ಎಂಬಾತ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾನೆ. ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದ ಬಾಲಕನಿಗೆ ತೇಜಲ್ ಅರೇ ನಗ್ನ ಚಿತ್ರ, ವಿಡಿಯೋಗಳನ್ನು ಕಳುಹಿಸಿದ್ದಾನೆ. ನಂತರ ನಿನ್ನ ಹೆತ್ತವರ ಸರಸ ಸಲ್ಲಾಪದ ವಿಡಿಯೋ ಕಳುಹಿಸುವಂತೆ ಕೇಳಿದ್ದಾನೆ.