ಗೋಹತ್ಯೆ ನಿಷೇಧ: ಕೇಂದ್ರದ ಆದೇಶ ಪರಿಶೀಲಿಸಿ ಕ್ರಮ- ಸಿಎಂ ಸಿದ್ದರಾಮಯ್ಯ

ಗೋಹತ್ಯೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿ ಇನ್ನು ನಮ್ಮ ಕೈ ಸೇರಿಲ್ಲ. ಆದೇಶದ ಪ್ರತಿ ಬಂದ ನಂತರ ಪರಿಶೀಲಿಸಿ....
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಗೋಹತ್ಯೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿ ಇನ್ನು ನಮ್ಮ ಕೈ ಸೇರಿಲ್ಲ. ಆದೇಶದ ಪ್ರತಿ ಬಂದ ನಂತರ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ಜವಾಹಾರ್ ಲಾಲ್ ನೆಹರು ಅವರ 51ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಇದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೊಳಪಡುವ ವಿಷಯ. ಹೀಗಾಗಿ, ಆತುರದ ನಿರ್ಧಾರ ಇಲ್ಲ ಎಂದು ತಿಳಿಸಿದರು.
ಇದೇ ವೇಳೆ ಸ್ವಾತಂತ್ರ್ಯ ಹೋರಾಟದ ಕುಟುಂಬದ ಹಿನ್ನೆಲೆಯಿಂದ ಬಂದು ದೇಶದ ಮೊದಲ ಪ್ರಧಾನಿಯಾಗಿದ್ದ ನೆಹರು ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ್ದರು. ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ನೆಹರು ಅವರಿಗೆ ಮಕ್ಕಳನ್ನು ಕಂಡರೆ ಬಹಳ ಪ್ರೀತಿ ಇತ್ತು. ಚಾಚಾ ನೆಹರು ಎಂದೇ ಅವರು ಜನಪ್ರಿಯರಾಗಿದ್ದರು ಎಂದು ಸಿಎಂ ಸ್ಮರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com