ಡಾ. ರಾಜ್ ಕುಮಾರ್ ರಸ್ತೆಯ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ

ರಾಜ್‌ಕುಮಾರ್‌ ರಸ್ತೆಯ ವಿವೇಕಾನಂದ ಕಾಲೇಜಿನ ಬಳಿ ನಿರ್ಮಿಸಿರುವ ಕೆಳಸೇತುವೆಯನ್ನು ಸಾರ್ವಜನಿಕರ ಬಳಕೆಗೆ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್‌ಕುಮಾರ್‌ ರಸ್ತೆಯ ವಿವೇಕಾನಂದ ಕಾಲೇಜಿನ ಬಳಿ ನಿರ್ಮಿಸಿರುವ ಕೆಳಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಸಮರ್ಪಿಸಲಾಯಿತು.
14.65 ಕೋಟಿ ರು ವೆಚ್ಚದಲ್ಲಿ ನಿರ್ಮಾಣವಾಗಿರುವ ಅಂಡರ್ ಪಾಸ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವೆ ಕೆ.ಜೆ ಜಾರ್ಜ್ ಕೂಡ ಉಪಸ್ಥಿತರಿದ್ದರು.
ಈ ರಸ್ತೆಯ ಕಾಮಗಾರಿ 2014ರಲ್ಲಿ ಆರಂಭವಾಗಿತ್ತು. 2015ರ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು. ಆದರೆ, ಈ ಅವಧಿಯಲ್ಲಿ ಶೇ 50ರಷ್ಟು ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಕಾಮಗಾರಿ ವಿಳಂಬದಿಂದ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿತ್ತು.
‘ರಾಷ್ಟ್ರೀಯ ಹೆದ್ದಾರಿ 4  (ತುಮಕೂರು ರಸ್ತೆ) ಹಾಗೂ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಸ್ಥಳದಲ್ಲಿದ್ದ ಜಲಮಂಡಳಿಯ ಏಳು ಕೊಳವೆಗಳು, ಬೆಸ್ಕಾಂ, ಕೆಪಿಟಿಸಿಎಲ್‌, ಬಿಎಸ್‌ಎನ್‌ಎಲ್‌ಗಳ ಜಾಲಗಳನ್ನು ಸ್ಥಳಾಂತರ ಮಾಡಲಾಗಿದೆ.
ಪಠಾಣ್ ಕೋಟ್ ವಾಯುನೆಲೆಯಲ್ಲಿ ಹುತಾತ್ಮರಾದ ಎನ್ ಎಸ್ ಜಿ ಕಮಾಂಡೋ ಲೆಪ್ಟಿನೆಂಟ್ ಕಲೋನಿಯಲ್ ನಿರಂಜನ್ ಹೆಸರನ್ನು ನಾಮಕರಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com