ಮಂಗಳೂರು ವಿಮಾನ ನಿಲ್ದಾಣ: ಶೌಚಾಲಯದಲ್ಲಿ 34 ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್ ಪತ್ತೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ 34 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Updated on
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ 34 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ.  ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯ ವಿಭಾಗದ ಡಿ ಆರ್ ಐ ಅಧಿಕಾರಿಗಳು ಶೌಚಾಲಯದಲ್ಲಿ ಅಡಗಿಸಿ ಇಟ್ಟಿದ್ದ 1 ಕೆಜಿ ಚಿನ್ನವನ್ನು ಪತ್ತೆ ಮಾಡಿದ್ದಾರೆ.
ಒಟ್ಟು 1166.5 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು ಇದು 34,17,845 ರೂ. ಬೆಲೆ ಬಾಳುತ್ತದೆ ಎನ್ನಲಾಗಿದೆ. 
ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬಂಧಿದ್ದ ಪ್ರಯಾಣಿಕನೊಬ್ಬ 10 ಚಿನ್ನದ ಬಿಸ್ಕಿಟ್ ಗಳನ್ನು  ಪ್ಲಾಸ್ಟಿಕ್​ ಚೀಲವೊಂದರಲ್ಲಿ ಹಾಕಿ ಶೌಚಾಲಯದಲ್ಲಿ  ಎಸೆದು ಹೋಗಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಶೌಚಾಲಯದಲ್ಲಿ ಶೋಧ ಕಾರ್ಯ ನಡೆಸಿ ಚಿನ್ನದ ಬಿಸ್ಕೆಟ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿನ್ನವನ್ನು ತಂದಿದ್ದ ವ್ಯಕ್ತಿಯ ಸುಳಿವು ಇನ್ನೂ ಲಭ್ಯವಾಗಿಲ್ಲ. ಆದರೆ ಅಕ್ರಮವಾಗಿ ಚಿನ್ನವನ್ನು ಸಾಗಿಸುವ ಕೆಲಸದಲ್ಲಿ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಕೆಲ ನೌಕರರು ಸಹಕಾರ ನೀಡುತ್ತಿದ್ದಾರೆ ಎಂದು  ಶಂಕೆ ವ್ಯಕ್ತವಾಗಿದ್ದು ಡಿ ಆರ್ ಐ ಅಧಿಕಾರಿಗಳು ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com