ರಾಜ್ಯ

83ನೇ ಕನ್ನಡ ಸಾಹಿತ್ಯ ಸಮ್ಮೇಳನ: 8 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ

83ನೇ ಕನ್ನಡ ಸಾಹಿತ್ಯ ಸಮ್ಮೇಳನ: 8 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಮೈಸೂರು: ನ.24 ರಿಂದ 26ರವರೆಗೆ ಮೂರು ದಿನಗಳ ಕಾಲ ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ರೂ.8 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಅಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ನಿನ್ನೆ ನಡೆಸಲಾದ ಸಭೆಯಲ್ಲಿ ಸಚಿವರು, ಸಮ್ಮೇಳನದ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದರು. 
ಬಳಿಕ ಮಾಹಿತಿ ನೀಡಿರುವ ಜಿಲ್ಲಾ ಉಸ್ತವಾರಿ ಸಚಿವ. ಡಾ.ಹೆಚ್.ಸಿ. ಮಹದೇವಪ್ಪ ಅವರು, ಕನ್ನಡ ಭಾಷೆ, ಸಂಸ್ಕೃತಿ, ಸಮಾನತೆ ಹಾಗೂ ಕೋಮು ಸಾಮರಸ್ಯ ವಿಚಾರಗಳ ಕುರಿತಂತೆ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತದೆ. ಮೈಸೂರಿನ ದಸರಾ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿದಂತೆಯೇ ಜಿಲ್ಲಾ ಆಡಳಿತ ಮಂಡಳಿ ಸಾಹಿತ್ಯ ಸಮ್ಮೇಳನವನ್ನು ದೊಡ್ಡ ಯಶಸ್ಸು ಕಾಣುವಂತೆ ಮಾಡಲು ಕೈ ಜೋಡಿಸಿದ್ದಾರೆಂದು ಹೇಳಿದ್ದಾರೆ.
 
ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ ಹಾಗೂ ರಾಷ್ಟ್ರದ ವಿವಿಧೆಡೆಗಳಿಂದ ಜನರು ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ 6 ವೇದಿಕೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಮುಖ್ಯ ವೇದಿಕೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಮರ್ಪಿಸಲಾಗಿದೆ. ಸಮ್ಮೇಳಕ್ಕೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಲಾವಿದರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ. 

ಮೂರು ದಿನಗಳ ಸಮ್ಮೇಳನದಲ್ಲಿ ಒಟ್ಟು 3.64 ಲಕ್ಷ ಜನರಿಗೆ ಊಟ ಮತ್ತು ತಿಂಡಿಯ ವ್ಯವಸ್ಥೆ ಮಾಡಲಾಗಿದೆ. ಮಹಾರಾಡ ಕಾಲೇಜು ಮೈದಾನ, ಸ್ಕೌಟ್ಸ್ ಆ್ಯಂಡ್ ಗೈಡ್ ಮೈದಾನ ಹಾಗೂ ಓವರ್ ಮೈದಾನದಲ್ಲಿ 200 ಕೌಂಟರುಗಳನ್ನು ತೆರೆಯಲಾಗುತ್ತಿದೆ, ರಾಗಿ ಮುದ್ದೆ, ಜೋಳದ ರೊಟ್ಟಿ, ಸಿರಿಧಾನ್ಯದ ಪಾಯಸ. ಮೈಸೂರು ಪಾಕ್, ಕುಚಲಕ್ಕಿ ಅನ್ನ, ಈರನಗೆರೆ ಬದನೆಕಾಯಿ ಪಲ್ಯ ಹಾಗೂ ಮೇಲುಕೋಟೆ ಪುಳಿಯೋಗರೆ ಸೇರಿ ತರೇಹವಾರಿ ಖಾದ್ಯಗಳ ಪಟ್ಟಿ ಈಗಾಗಲೇ ಸಿದ್ಧವಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.