ನವದೆಹಲಿ: ಶತಮಾನಗಳ ಇತಿಹಾಸ ಹೊಂದಿರುವ ಕರ್ನಾಟಕದ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಕಂಬಳಕ್ಕೆ ಅವಕಾಶ ನೀಡುವ ಕರ್ನಾಟಕದ ಕಾಯ್ದೆಗೆ ತಡೆ ಕೋರಿ ಪೆಟಾ (ಪೀಪಲ್ ಫಾರ್ ಎಥಿಕಲ್ ಟ್ರೀಟ್ ಮೆಂಟ್ ಆಫ್ ಎನಿಮಲ್ಸ್) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಡೆ ನೀಡಲು ನಿರಾಕರಿಸಿದೆ.
ಈ ಸಂಬಂಧ ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನವೆಂಬರ್ 13 ಕ್ಕೆ ನಿಗದಿಪಡಿಸಿದೆ. ಅಲ್ಲದೆ ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಹಾಜರಿರುವಂತೆ ಅಟಾರ್ನಿ ಜನರಲ್ ಅವರಿಗೆ ಸೂಚಿಸಿದೆ.