ಇತ್ತೀಚೆಗೆ ನಡೆದ ಕನ್ನಡ ರಾಜ್ಯೋತ್ಸವದ ವೇಳೆ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ರಾಜ್ಯವು ಪ್ರತ್ಯೇಕ ಧ್ವಜ ಹೊಂದುವ ಹಕ್ಕನ್ನು ಹೊಂದಿದೆ ಎಂದು ಹೇಳಿದ್ದರು. ಹೀಗಾಗಿ ಸಮಿತಿ ನಾಳೆ ಸಭೆ ಸೇರಿ, ಧ್ವಜ ವಿನ್ಯಾಸ, ಮತ್ತು ಪ್ರತ್ಯೇಕ ನಾಡ ಧ್ವಜಕ್ಕೆ ಎದುರಾಗಿರುವ ಅಡೆತಡೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಷ್ಣು ಕುಮಾರ್ ಹೇಳಿದ್ದಾರೆ.