ಪರಿವರ್ತನಾ ಯಾತ್ರೆ ಸಮಾವೇಶ ವಿಫಲ: ರಾಜ್ಯ ಬಿಜೆಪಿ ಮುಖಂಡರ ಮೇಲೆ ವರಿಷ್ಠರ ಕೆಂಗಣ್ಣು

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿವೆ. ಬಿಜೆಪಿಯ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾವೇಶ ವಿಫಲವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಮುಖಂಡರ ಮೇಲೆ ಪಕ್ಷದ ವರಿಷ್ಠರು ತೀವ್ರವಾಗಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿವೆ. ಬಿಜೆಪಿಯ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾವೇಶ ವಿಫಲವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಮುಖಂಡರ ಮೇಲೆ ಪಕ್ಷದ ವರಿಷ್ಠರು ತೀವ್ರವಾಗಿ ಕೆಂಡಾಮಂಡಲಗೊಂಡಿದ್ದಾರೆ. 
ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪರಿವರ್ತನಾ ರ್ಯಾಲಿ ಉದ್ಘಾಟನಾ ಸಂದರ್ಭದಲ್ಲಿ ಎದುರಾದ ವಿಫಲತೆಗಳು ಮತ್ತೆಂದೂ ಆಗದಂತೆ ಎಚ್ಚರಿಕೆ ವಹಿಸುವಂತೆ ರಾಜ್ಯ ಚುನಾವಣಾ ಪ್ರಚಾರ ಹೊಣೆಗಾರಿಕೆಯನ್ನು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರಿಗೆ ವಹಿಸಿದ್ದಾರೆಂದು ತಿಳಿದುಬಂದಿದೆ. 
ಪಕ್ಷದ ವರಿಷ್ಠರು ನೀಡಿರುವ ನಿರ್ದೇಶದಂತೆಯೇ ಪ್ರಕಾಶ್ ಜವಡೇಕರ್ ಅವರು ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ರ್ಯಾಲಿ ಕುರಿತಂತೆ ಎಲ್ಲಾ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪಕ್ಷದಲ್ಲಿರುವ ಒಬ್ಬ ವ್ಯಕ್ತಿಯಿಂದಾಗಿ ಇತರೆ ನಾಯಕರು ರ್ಯಾಲಿ ಕುರಿತಂತೆ ಆಸಕ್ತಿಗಳನ್ನು ತೋರುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿರುವ ಹಿನ್ನಲೆಯಲ್ಲಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದಾರೆಂದು ಹೇಳಲಾಗುತ್ತಿದೆ. 
ರಾಜ್ಯ ಬಿಡೆಪಿ ಪಕ್ಷದಲ್ಲಾಗುತ್ತಿರುವ ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಜವಡೇಕರ್ ಅವರು ನಿನ್ನೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಪಕ್ಷದ ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಜೊತೆ ಜವಡೇಕರ್ ಅವರು ಪಕ್ಷದ ಬಲವರ್ಧನೆಗಾಗಿ ಚರ್ಚೆ ನಡೆಸಿದರು. 
ಸಭೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ರ್ಯಾಲಿ ವೈಫಲ್ಯಕ್ಕೆ ಕಾರಣಗಳ ಸಹಿತ ಜವಡೇಕರ್ ಅವರಿಗೆ ವರದಿಯನ್ನು ಸಲ್ಲಿಸಿದರು. ನಗರದಲ್ಲಿರುವ ಶಾಸಕರು ಹಾಗೂ ಕಾರ್ಪೋರೇಟರ್ ಗಳು ರ್ಯಾಲಿ ಸಿದ್ಧತೆಗಳಿಂದ ದೂರವಿದ್ದರು. ರ್ಯಾಲಿ ವೈಫಲ್ಯಕ್ಕೆ ಇದೇ ಪ್ರಮುಖ ಕಾರಣವೆಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ. 
ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನ.2 ರಂದು ನಗರದ ಹೊರವಲಯದಲ್ಲಿನ ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಬೃಹತ್ ಉದ್ಘಾಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾರಂಭವು ನಿರೀಕ್ಷಿತ ಸಂಖ್ಯೆ ಕಾರ್ಯಕರ್ತರಿಲ್ಲದೇ ಅವ್ಯವಸ್ಥೆ ಉಂಟಾಗಿತ್ತು. ಈ ಬಗ್ಗೆ ಸಮಾರಂಭಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com