ಮುಂದಿನ ವರ್ಷ ಬೆಂಗಳೂರಿನಲ್ಲಿ ಮತ್ತೊಂದು ಸರ್ಕಾರಿ ಮೆಡಿಕಲ್ ಕಾಲೇಜು: ಸಿಎಂ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ವರ್ಷ ಎರಡನೇ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ..
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ವರ್ಷ ಎರಡನೇ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ಟೆಂಡರ್ ಪ್ರಕ್ರಿಯ ಮುಗಿದಿದ್ದು, 2018 ರಿಂದ ಕಾಲೇಜು ಆರಂಭವಾಗಬೇಕಿದ್ದು, 200 ಕೋಟಿ ರು ಯೋಜನೆ ಇದಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 10 ಮೆಡಿಕಲ್ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದು, ಆರು ಕಾಲೇಜುಗಳು ಆರಂಭವಾಗಬೇಕಿದ್ದು, ಮತ್ತೆ ಆರು ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ, ಪ್ರತಿಯೊಂದು ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು ಇರಬೇಕು ಎಂದು ಹೇಳಿದ ಅವರು, ಯಾದಗಿರಿ, ಹಾವೇರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. 
ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿದ ನಂತರ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಒಪ್ಪುವುದಿಲ್ಲ ಎಂದು ಸಿಎಂ ಬೇಸರ ವ್ಯಕ್ತ ಪಡಿಸಿದರು.
ಬೌರಿಂಗ್ ಮೆಡಿಕಲ್ ಕಾಲೇಜಿ ಸಂಶೋಧನಾ ಇನ್ ಸ್ಟಿಟ್ಯೂಟ್ ನಲ್ಲಿ 150  ವಿದ್ಯಾರ್ಥಿಗಳಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೀಟ್ ಸಿಗಬೇಕು ಎಂದು ಹೇಳಿದ್ದಾರೆ. ಶಿವಾಜಿನಗರದ ಬಸ್ ನಿಲ್ದಾಣದ ಬಳಿ ಇರುವ ಚೋಟಾ ಮೈದಾನದ ಬಳಿ ‌ಮೆಟ್ರೋ ನಿಲ್ದಾಣ ಬರುತ್ತದೆ. ಅಲ್ಲಿಂದ ಒಂದು ಸುರಂಗ ಮಾರ್ಗ ಬೌರಿಂಗ್ ಆಸ್ಪತ್ರೆಗೆ ಮತ್ತೊಂದು ಘೋಷಾ ಆಸ್ಪತ್ರೆಗೆ ನಿರ್ಮಾಣ ಮಾಡಿ ಅಂತಾ ಸಿಎಂಅವರಿಗೆ ಮನವಿ ಮಾಡಿದ್ದೇನೆ. 200 ಕೋಟಿ ವೆಚ್ಚದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಆಗಲಿದೆ. 150 ವಿದ್ಯಾರ್ಥಿಗಳು ಇದರಲ್ಲಿ ಕಲಿಯಬಹುದು. ಈ ಭಾಗದ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಗುರಿಯಿಂದ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com