ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ
ರೂ.50 ಸಾವಿರ ವರೆಗಿನ ನೇಕಾರರ ಸಾಲ ಮನ್ನಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ಸಹಕಾರ ಸಂಘಗಳಲ್ಲಿ ನೇಕಾರಿಕೆಗಾಗಿ ಪಡೆದ ನೇಕಾರರ ರೂ.50 ಸಾವಿರ ವರೆಗಿನ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ...
ಬೆಂಗಳೂರು: ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ಸಹಕಾರ ಸಂಘಗಳಲ್ಲಿ ನೇಕಾರಿಕೆಗಾಗಿ ಪಡೆದ ನೇಕಾರರ ರೂ.50 ಸಾವಿರ ವರೆಗಿನ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಣೆ ಮಾಡಿದ್ದಾರೆ.
ಜಿಲ್ಲಾ ಆಡಳಿತ ಮಂಡಳಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಮಂಗಳವಾರ ರಾತ್ರಿ ನಿರ್ಧಾರ ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ನೇಕಾರರ ಸಾಲವನ್ನು ಮಾಡಲಾಗಿದೆ. ಸರ್ಕಾರದ ಈ ನಿರ್ಧಾರದಿಂದ 9,000 ನೇಕಾರರಿಗೆ ಲಾಭವಾಗಲಿದೆ. ಈ ಉದ್ದೇಶಕ್ಕೆ ಒಟ್ಟಾರೆ ರೂ.52 ಕೋಟಿ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರೈತರ ಸಾಲಮನ್ನಾಗಾಗಿ ಈ ವರೆಗೂ ಸರ್ಕಾರ ರೂ.1,064 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ನೀಡಿರುವ ಮಾಹಿತಿಯಂತೆ, ರಾಜ್ಯ ಸರ್ಕಾರ ಸಾಲಮನ್ನಾ ಕುರಿತಂತೆ ತೆಗೆದುಕೊಂಡಿರುವ ನಿರ್ಧಾರದಿಂದ 20 ಜಿಲ್ಲೆಗಳ 3,27,018 ರೈತರಿಗೆ ಲಾಭವಾಗಿದೆ. ಪ್ರಮುಖವಾಗಿ ಮಂಡ್ಯ ಜಿಲ್ಲೆಯ 28,296 ರೈತರಿಗೆ ಲಾಭವಾಗಿದೆ. ಕಲಬುರ್ಗಿಯಲ್ಲಿ 27,867 ರೈತರಿಗೆ ಅನುಕೂಲವಾಗಿದೆ. ಕೊಡಗು ಜಿಲ್ಲೆಯಲ್ಲಿ 510 ರೈತರಿಗೆ ಲಾಭವಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ