ಬಿಜೆಪಿ ಸೇರುವಂತೆ ಡಿಕೆಶಿ ಮೇಲೆ ಒತ್ತಡ ಹೇರಿಲ್ಲ, ಸಿದ್ದು ಆರೋಪ ಸುಳ್ಳು: ಐಟಿ ಇಲಾಖೆ

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಆಧಾರ ರಹಿತವಾದದ್ದು ಎಂದು ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ಸ್ಪಷ್ಟನೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಆಧಾರ ರಹಿತವಾದದ್ದು ಎಂದು ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ಸ್ಪಷ್ಟನೆ ನೀಡಿದ್ದಾರೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಕುರಿತಂತೆ ಪ್ರತಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿ ಸ್ಪಷ್ಟಪಡಿಸಿರುವ ಐಟಿ ಅಧಿಕಾರಿಗಳು, ಡಿ.ಕೆ. ಶಿವಕುಮಾರ್ ಸೇರಿದಂತೆ ಯಾವುದೇ ವ್ಯಕ್ತಿಗೆ ಬಿಜೆಪಿ ಸೇರ್ಪಡೆಯಾಗುವಂತೆ ಸಲಹೆ ನೀಡಿಲ್ಲ. ಸಿದ್ದರಾಮಯ್ಯ ಅವರ ಹೇಳಿಕೆ ರಾಜಕೀಯ ಪ್ರೇರಿತವಾದ ಹೇಳಿಕೆಯಾಗಿದೆ ಎಂದು ಹೇಳಿದೆ. 
ಆದಾಯ ತೆರಿಗೆ ಇಲಾಖೆಯು ಪಕ್ಕಾ ವೃತ್ತಿಪರತೆಯಿಂದ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ, ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದೆ ತಟಸ್ಥ ನಿಲುವು ಹೊಂದಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿದೆ. ಇಂತಹ ಹೇಳಿಯು ಇಲಾಖೆ ಮೇಲೆ ಅನುಮಾನ ಹುಟ್ಟಿಸುವಂತಹದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 
ತೆರಿಗೆ ಇಲಾಖೆ ನಡೆಸುವ ಯಾವುದೇ ಕಾರ್ಯಾಚರಣೆಗಳನ್ನು ವಿನಾಯಿತಿ ನೀಡದೆ ನಡೆಸಲಾಗುತ್ತಿದೆ. ಆದಾಯದ ಬಗ್ಗೆ ಬಹಿರಂಗಪಡಿಸದ ಯಾವುದೇ ವ್ಯಕ್ತಿಗಳಾದರೂ ಅಂತಹವರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಕೋಟ್ಯಾಂತರ ನಗದು, ಚಿನ್ನಾಭರಣ ಸೇರಿದಂತೆ ತೆರಿಗೆ ವಂಚನೆಯ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀನೆ ನಡೆಸಲಾಗುತ್ತಿದೆ. ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com