ಕೇಂದ್ರೀಯ ಕಾರಾಗೃಹದಲ್ಲಿ ಅಕ್ರಮ: ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾ ಸಮಿತಿ

ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ತನಿಖಾ ಸಮಿತಿ ಸೋಮವಾರ ವರದಿಯನ್ನು ಸಲ್ಲಿಸಿದೆ...
ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹ
ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹ
Updated on
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ತನಿಖಾ ಸಮಿತಿ ಸೋಮವಾರ ವರದಿಯನ್ನು ಸಲ್ಲಿಸಿದೆ. 
ವರದಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಅವರಿಗೆ ವಿಶೇಷ ಸೌಲಭ್ಯ ದೊರೆತಿರುವುದು ನಿಜ. ಆದರೆ ಅದಕ್ಕೆ ಕಾರಾಗೃಹದ ಅಧಿಕಾರಿಗಳು ಹಣ ಪಡೆದಿದ್ದರುಎಂಬ ಆರೋಪಕ್ಕೆ ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿದೆ ಎಂದು ತಿಳಿದುಬಂದಿದೆ. 
ಪ್ರಕರಣದ ವಿಚಾರಣೆ ನಡೆಸುತ್ತಿರುವ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದೆ ಎಂದು ಹೇಳಲಾಗುತ್ತಿದೆ. 
ಪರಪ್ಪನ ಅಗ್ರಹಾರ ಕಾರಾಗೃಹದ ಅಕ್ರಮ ಪ್ರಕರಣ ಕುರಿತು ವಿಚಾರಣೆ ಪೂರ್ಣಗೊಳಿಸಿರುವ ವಿನಯ್ ಕುಮಾರ್ ನೇತೃತ್ವದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ. 
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಅವರಿಗೆ ವಿಶೇಷ ಸೌಲಭ್ಯ ನೀಡಲಾಗಿದೆ. ಆದರೆ, ಕಾರಾಗೃಹದ ಅಧಿಕಾರಿಗಳು ಅದಕ್ಕೆ ಹಣ ಪಡೆದಿದ್ದರು ಎಂಬ ಆರೋಪಕ್ಕೆ ಖಚಿತ ಪುರಾವಣೆಗಳು ಲಭ್ಯವಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. 
ವರದಿ ಕುರಿತಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಅವರು ಖಚಿತ ಪಡಿಸಿದ್ದಾರೆ. ಜೈಲಿನಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಮಾರ್ ಅವರು ವರದಿಯನ್ನು ಸಲ್ಲಿಸಿದ್ದು, ಶೀಘ್ರದಲ್ಲಿಯೇ ವರದಿಯನ್ನು ಪರಿಶೀಲಿಸಲಾಗುತ್ತದೆ ಎಂದಿದ್ದಾರೆ. 
ವರದಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿನಯ್ ಕುಮಾರ್ ಅವರು, ವರದಿ ಕುರಿತಂತೆ ಯಾವುದೇ ರೀತಿಯ ಮಾಹಿತಿಗಳನ್ನು ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. 
ಅಕ್ರಮ ಆಸ್ತಿ ಗಳಿಗೆ ಪ್ರಕರಣ ಸಂಬಂಧ ಶಶಿಕಲಾ ಅವರಿದೆ ಸಂದರ್ಶಕರ ಭೇಟಿ ಸೇರಿ ನಿಯಮಬಾಹಿರವಾಗಿ ಕೆಲವು ಸೌಲಭ್ಯ ನೀಡಿರುವುದು ಪತ್ತೆಯಾಗಿದೆ. ಆದರೆ, ಸೌಲಭ್ಯ ಒದಗಿಸಿದ್ದಕ್ಕೆ ಪ್ರತಿಯಾಗಿ ಶಶಿಕಲಾ ನಟರಾಜನ್ ಅವರಿಂದ ಹಣ ಸೇರಿದಂತೆ ಬೇರೆ ರೀತಿಯಲ್ಲಿ ಅನುಕೂಲ ಪಡೆದಿದ್ದರು ಎಂಬ ಆರೋಪಕ್ಕೆ ಖಚಿತ ಪುರಾವೆಗಳು ಲಭ್ಯವಾಗಿಲ್ಲ ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. 
ಕೆಲ ದಿನಗಳ ಹಿಂದಷ್ಟೇ ಡಿಐಜಿ ರೂಪಾ ಅವರು ಜೈಲು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದರು. ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ, ಇಳವರಸಿ, ಛಾಪಾ ಕಾಗದ ಹಗರಣ ಕಿಂಗ್ ಪಿನ್ ಅಬ್ದುಲ್ ಕಲೀಮ್ ತೆಲಗಿ ಸೇರಿ ಹಲವರಿಗೆ ಐಷಾರಾಮಿ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ರೂಪಾ ಅವರ ಈ ಆರೋಪ ರಾಜ್ಯ ರಾಜಕೀಯಲ್ಲಿ ಭಾರೀ ಗದ್ದಲವನ್ನುಂಟು ಮಾಡಿತ್ತು. 
ವರದಿ ಸಲ್ಲಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರೂಪಾ ಅವರು, ಭ್ರಷ್ಟಾಚಾರ ಆಯಾಮದಲ್ಲಿ ಸಮಿತಿ ತನಿಖೆಯೆನ್ನು ನಡೆಸುತ್ತಿಲ್ಲ. ಅಧಿಕಾರಿಗಳಿಗೆ ನೀಡಲಾಗುತ್ತಿರುವ ಹಣ, ಹಣವನ್ನು ಎಲ್ಲಿಂದ ನೀಡಲಾಗುತ್ತಿದೆ, ಎಷ್ಟು ಹಣವನ್ನು ನೀಡಲಾಗುತ್ತಿದೆ ಎಂಬುದರ ಕುರಿತಂತೆ ಭ್ರಷ್ಟಾಚಾರ ನಿಗ್ರಹ ದಳ ಅಥವಾ ಪೊಲೀಸರು ತನಿಖೆ ನಡೆಸಬೇಕಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com