ಖಾಸಗಿ ವೈದ್ಯರ ಮುಷ್ಕರ: ತಕ್ಷಣ ಚಿಕಿತ್ಸೆ ಸಿಗದೆ ಕೊಪ್ಪಳದಲ್ಲಿ ಪಿಡಿಒ ಸಾವು

ರಾಜ್ಯ ಸರ್ಕಾರದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಕಳೆದ ಎರಡು....
ಗ್ಯಾನಪ್ಪ ಬದ್ನಾಳ್
ಗ್ಯಾನಪ್ಪ ಬದ್ನಾಳ್
ಕೊಪ್ಪಳ: ರಾಜ್ಯ ಸರ್ಕಾರದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಒಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಕ್ಕಂಪಿ ಗ್ರಾಮದ ಪಿಡಿಒ ಗ್ಯಾನಪ್ಪ ಬದ್ನಾಳ್(56) ಅವರು ಇಂದು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಗಂಗಾವತಿಗೆ ಕರೆದುಕೊಂಡು ಬರಲಾಗಿದೆ. ಆದರೆ ಖಾಸಗಿ ಆಸ್ಪತ್ರೆಗಳ ಬಂದ್ ಆಗಿದ್ದರಿಂದ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ರಶ್ ಇದ್ದುದ್ದರಿಂದ ತುರ್ತು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗ್ಯಾನಪ್ಪ ಅವರು ಕೊಪ್ಪಳ ತಾಲೂಕಿನ ವನಬಳ್ಳಾರಿ ಗ್ರಾಮ ಪಂಚಾಯ್ತಿಯ ಪಿಡಿಒ ಆಗಿ ಸೇವೆ ಸಲ್ಲಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com