ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಖಾಸಗಿ ವೈದ್ಯರ ಮುಷ್ಕರದಿಂದಾಗಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ವರೆಗೂ ವಿವಿಧ ಜಿಲ್ಲೆಯ ವಿವಿಧ ಪ್ರಕರಣಗಳಲ್ಲಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡವಿದ್ದು, ಸರ್ಕಾರ ತನ್ನ ಹಠಮಾರಿ ಧೋರಣೆ ಮುಂದವರೆಸಿದರು ವೈದ್ಯರು ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಅಂತೆಯೇ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ಶಸ್ತ್ರ ಕ್ರಿಯೆಗಳನ್ನು ಮುಂದೂಡಿ, ಖಾಸಗಿ ಲ್ಯಾಬ್‌ಗಳ ಕಾರ್ಯಾಚರಣೆಯನ್ನೂ ಕೂಡ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ.