ಖಾಸಗಿ ವೈದ್ಯರ ಮುಷ್ಕರ; ಸಮಸ್ಯೆ ಬಗೆಹರಿಯದಿದ್ದರೆ ಮಧ್ಯಪ್ರವೇಶ: ಹೈಕೋರ್ಟ್

ರಾಜ್ಯ ಸರ್ಕಾರದ ಉದ್ದೇಶಿತ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ(ಕೆಪಿಎಂಇ) ಕಾಯ್ದೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು....
ಮುಷ್ಕರನಿರತ ವೈದ್ಯರು
ಮುಷ್ಕರನಿರತ ವೈದ್ಯರು
ಬೆಂಗಳೂರು: ರಾಜ್ಯ ಸರ್ಕಾರದ ಉದ್ದೇಶಿತ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ(ಕೆಪಿಎಂಇ) ಕಾಯ್ದೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ನಡೆಸುತ್ತಿರುವ ಮುಷ್ಕರದ ಸಮಸ್ಯೆ ಬಗೆಹರಿಯದಿದ್ದರೆ ಮಧ್ಯಪ್ರವೇಶ ಮಾಡುವುದಾಗಿ ಕರ್ನಾಟಕ ಹೈಕೋರ್ಟ್ ಗುರುವಾರ ಸ್ಪಷ್ಟಪಡಿಸಿದೆ.
(ಕೆಪಿಎಂಇ) ಕಾಯ್ದೆ ವಿರೋಧಿಸಿ ಖಾಸಗಿ ವೈದ್ಯರು ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್ ಜಿ ರಮೇಶ್ ಹಾಗೂ ನ್ಯಾಯಧೀಶ ಪಿಎಸ್ ದಿನೇಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಜ್ಯ ಸರ್ಕಾರ ಮತ್ತು ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮಾತುಕತೆ ನಡೆಸಿವೆಯೇ? ಎಂದು ಅಡ್ವೋಕೇಟ್ ಜನರಲ್ ಅವರಿಗೆ ಪ್ರಶ್ನಿಸಿದೆ. 
ವೈದ್ಯರ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆದಷ್ಟು ಬೇಗ ವೈದ್ಯರೊಂದಿಗೆ ಮಾತುಕತೆ ನಡೆಸಿದ ಸಮಸ್ಯೆ ಬಗೆಹರಿಸಿ. ಇಲ್ಲದಿದ್ದರೆ ಕೋರ್ಟ್ ಮಧ್ಯ ಪ್ರವೇಶಿಸಬೇಕಾಗುತ್ತದೆ ಎಂದು ವಿಭಾಗೀಯ ಪೀಠ ಹೇಳಿದೆ.
ವೈದ್ಯರ ಮುಷ್ಕರ ಪ್ರಶ್ನಿಸಿ ವಕೀಲ ಅಮೃತೇಶ್ ಹಾಗೂ ನೆಲಮಂಗಲದ ಆದಿನಾರಾಯಣ ಶೆಟ್ಟಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com