ವ್ಯಾಪಕ ಚರ್ಚೆ ಬಳಿಕ ರಸ್ತೆ ಸುರಕ್ಷತೆ ಪ್ರಾಧಿಕಾರಕ್ಕೆ ಒಪ್ಪಿಗೆ

ರಾಜ್ಯದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ 2017ನೇ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ವಿಧೇಯಕಕ್ಕೆ ವಿಧಾನ ಪರಿಷತ್ ವ್ಯಾಪಕ ಚರ್ಚೆ ಬಳಿಕ ಗುರುವಾರ ಅನುಮೋದನೆ...
ಸದನವನ್ನುದ್ದೇಶಿಸಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಸದನವನ್ನುದ್ದೇಶಿಸಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ 2017ನೇ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ವಿಧೇಯಕಕ್ಕೆ ವಿಧಾನ ಪರಿಷತ್ ವ್ಯಾಪಕ ಚರ್ಚೆ ಬಳಿಕ ಗುರುವಾರ ಅನುಮೋದನೆ ನೀಡಿದೆ. 
ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಸದನದಲ್ಲಿ ವಿಧೇಯಕ ಮಂಡಿಸಿದ ಬಳಿಕ ಸುಧೀರ್ಘ ಚರ್ಚೆ ನಡೆಸಿ ಕಾಯಿದೆಗೆ ಅಂಗೀಕಾರ ನೀಡಲಾಯಿತು. 
ವಿಧೇಯಕದಲ್ಲಿನ ಸಾಧಕ-ಬಾಧಕಗಳ ಕುರಿತು ಪರಾಮರ್ಶೆಗೊಳಿಸಿ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರೆ ಮಾತ್ರ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ಬಹುತೇಕ ರಸ್ತೆ ಅಪಘಾತಗಳಿಗೆ ಮದ್ಯಪಾನ, ನಿದ್ರೆಗೆ ಜಾರುವುದು, ಚಾಲಕನ ನಿರ್ಲಕ್ಷ್ಯ ಹಾಗೂ ಚಾಲನೆ ಕೊರತೆ ಅನುಭವವೇ ಪ್ರಮುಖ ಕಾರಣವಾಗಿವೆ. 
ಅವೈಜ್ಞಾನಿಕ ರಸ್ತೆಗಳು, ಹಂಪ್ಸ್ ಗಳು ಕೂಡ ರಸ್ತೆ ಅಪಘಾತಗಳಿಗೆ ಕಾರಣವಾಗಿವೆ ಎಂದು ವಿ.ಎಸ್. ಉಗ್ರಪ್ಪ ಅವರು ಸದನದ ಗಮನ ಸೆಳೆದರು. ರಸ್ತೆ ಸುರಕ್ಷತಾ ಪ್ರಾಧಿಕಾರದ ವಿಧೇಯಕದಲ್ಲಿ ಸಾಕಷ್ಟು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಹೇಳಿದರು.
ಬಳಿಕ ಬಸನಗೌಡ ಪಾಟೀಲ ಯತ್ನಾಳ, ತಾರಾ ಅನುರಾಧ, ಕಾಪ್ಪನ್ ಗಮೇಶ್ ಕಾರ್ಣಿಕ್ ಹಾಗೂ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರು ಮಾತನಾಡಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದರೂ. 
ಸದಸ್ಯರ ಸಲಹೆ ಹಾಗೂ ಸೂಚನೆಗಳನ್ನು ಆಲಿಸಿದ ಬಳಿಕ ಮಾತನಾಡಿರುವ ಸಚಿವ ರೇವಣ್ಣ ಅವರು, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ರಾಜ್ಯಮಟ್ಟದಲ್ಲಿಯೂ ಇವೆ. ವಾಹನ ಸವಾರರಿಗೆ 3 ತಿಂಗಳ ವಾಹನ ಚಾಲನಾ ತರಬೇತಿ ನೀಡಲು ಈಗಾಗಲೇ ಬೆಂಗಳೂರು ಮತ್ತು ಧಾರವಾಡದಲ್ಲಿ ತರಬೇತಿ ಸಂಸ್ಥೆಗಳನ್ನು ನಡೆಸಲಾಗುತ್ತಿದೆ. 
ಜನವರಿಯಿಂದ ಸೆಪ್ಟಂಬರ್ ವರೆಗೆ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ದೇಶದಲ್ಲಿ ರಾಜ್ಯದಲ್ಲಿ ಅಪಘಾತ ಪ್ರಕರಣ ಕಡಿಮೆಯಾಗಿದ್ದು, ರಾಜ್ಯ ದೇಶದಲ್ಲಿಯೇ ನ.1 ಸ್ಥಾನದಲ್ಲಿದೆ. ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಹೊಸ ವಾಹನಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯಗೊಳಿಸಲಾಗಿದೆ. ಅವೈಜ್ಞಾನಿಕ ಹಂಪ್ಸ್ ಗಳನ್ನು ತೆರವುಗೊಳಿಸುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ಕಾನೂನು ರಚನೆಯಲ್ಲಿ ಸದಸ್ಯರು ನೀಡಿದ ಸಲಹೆ ಸೂಚನೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com