ರಾಜ್ಯ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಸಂಜೀವ್ ಕುಮಾರ್ ನೇಮಕ

ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿ ಆಗಿ ಸಂಜೀವ್ ಕುಮಾರ್ ನೇಮಕವಾಗಿದ್ದಾರೆ.
ಸಂಜೀವ್ ಕುಮಾರ್
ಸಂಜೀವ್ ಕುಮಾರ್
Updated on
ಬೆಂಗಳೂರು: ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿ ಆಗಿ ಸಂಜೀವ್ ಕುಮಾರ್ ನೇಮಕವಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಆರು ತಿಂಗಳು ಇರುವ ಸಮಯದಲ್ಲಿ  ಕಳೆದ ಐದು ವರ್ಷಗಳಿಂದ  ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದ ಅನಿಲ್‌ ಕುಮಾರ್‌ ಝಾ  ಅವರನ್ನು ವರ್ಗಾವಣೆ ಮಾಡಲಾಗಿದೆ.
ಭಾರತೀಯ ಚುನಾವಣಾ ಆಯೋಗ ಈ ಸಂಬಂಧ ರಾಜ್ಯ ಸರ್ಕಾರದ ಜತೆ ಮಾತುಕತೆ ನಡೆಸಿದ ನಂತರ ಜನಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್‌ 13ಎ ಅನ್ವಯ ಸಂಜೀವ್‌ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ.
1986 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸಂಜೀವ್‌ ಕುಮಾರ್‌ ಕೌಶಲ್ಯ ಅಭಿವೃದ್ಧಿ ಮತ್ತು  ಉದ್ಯಮಶೀಲತೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂದಿನಿಂದಲೇ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮಾಜಿ ಚುನಾವಣಾಧಿಕಾರಿ ಅನಿಲ್‌ ಕುಮಾರ್‌ ಝಾ ಅವರು ಕಳೆದ ಏಪ್ರಿಲ್ ನಲ್ಲಿಯೇ ವರ್ಗಾವಣೆಗಾಗಿ ಮನವಿ ಸಲ್ಲಿಸಿದ್ದರು. ಅದರ ಅನುಸಾರ ಈ ವರ್ಗಾವಣೆ ಪ್ರಕ್ರಿಯೆ ನಡೆದಿರುವುದಾಗಿ ಮೂಲಗಳು ತಿಳಿಸಿದೆ. ಇದೀಗ ಅನಿಲ್ ಕುಮಾರ್ ಝಾ ಅವರು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com